ಮಾರ್ಚ 9 ರಂದು ರಾಷ್ಟ್ರೀಯ ಲೋಕ ಅದಾಲತ್

ಗದಗ,ಮಾ2: ಜಿಲ್ಲೆಯಲ್ಲಿ ಮಾರ್ಚ 9 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಅವರು ತಿಳಿಸಿದರು.

ಜಿಲ್ಲಾ ನ್ಯಾಯಾಲಯದ ವಿಡಿಯೋ ಕಾನ್ಪರನ್ಸ ಹಾಲ್‍ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು 15 ಬೆಂಚಗಳನ್ನು ರಚಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 19622 ವಿವಿಧ ಚಾಲ್ತಿಪ್ರಕರಣಗಳಿದ್ದು ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 3330 ಪ್ರಕರಣಗಳನ್ನು ಗುರುತಿಸಿದ್ದು ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆÉ ಪ್ರಕರಣಗಳು, ಚೆಕ್‍ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ ಎಂದರು.

ಪಕ್ಷಗಾರರು ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಬಹುದಾಗಿದೆ. ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು. ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂದsವ್ಯ ಉಳಿಸಿಕೊಳ್ಳಲು ಸಹಾಯಕವಾಗಲಿದೆ ಎಂದು ತಿಳಿಸಿದರು.

ಕಳೆದ ಡಿಸೆಂಬರ್-2023 ರಂದು ಜರುಗಿದ ಲೋಕ ಅದಾಲತ್‍ನಲ್ಲಿ 3718 ಚಾಲ್ತಿ ಪ್ರಕರಣಗಳನ್ನು 7216 ವ್ಯಾಜ್ಯಪೂರ್ವ ಪ್ರಕರಣಗಳನ್ನು ಸೇರಿ ಒಟ್ಟು 10934 ಪ್ರಕರಣಗಳ್ನು ರಾಜಿ ಮೂಲಕ ಇತ್ಯರ್ಥಪಡಿಸಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ ಅವರು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಗುರುಪ್ರಸಾದ ಅವರು ಮಾತನಾಡಿ ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂದsಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು, ಈಗಾಗಲೇ ಸಂಬಂಧಪಟ್ಟ ಇಲಾಖೆಯ ಹಾಗೂ ನಿಗಮ ಮಂಡಳಿಗಳ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ಜರುಗಿಸಿ ಹೆಚ್ಚಿನ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ತಿಳಿಯಪಡಿಸಿದೆ ಎಂದರು.

ಪ್ರಕರಣಗಳಿಗೆ ಸಂಬಂದsಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿದs ಇಲಾಖೆಗಳಿಗೆ ಸಂಬಂದsಪಟ್ಟ ಅಧಿಕಾರಿಗಳು, ಇಲಾಖೆಗಳವರು ಮಾರ್ಚ 9 ರಂದು ಜರಗುವ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ. ಪಕ್ಷಗಾರರು ನ್ಯಾಯಾಲಯಗಳಲ್ಲಿರುವ ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.