ಮಾಸ್ಕ್ ಜಾಗೃತಿ ಜಾಥಾಕ್ಕೆ ಚಾಲನೆ


ಹಾವೇರಿ:ಏ.20: ಕೊವೀಡ್-19 ಎರಡನೇ ಅಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್, ಉಪ ವಿಭಾಗ ಹಾಗೂ ಶಹರ ಪೊಲೀಸ್ ಠಾಣೆ ಆಶ್ರಯದಲ್ಲಿ ಸೋಮವಾರ ಆಯೋಜಿಸಲಾದ ಮಾಸ್ಕ್ ಜಾಗೃತಿ ಜಾಥಾಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು ಅವರು ಚಾಲನೆ ನೀಡಿದರು.
ನಗರದ ಹೊಸಮನಿ ಸಿದ್ದಪ್ಪ ವೃತ್ತದಿಂದ ಆರಂಭವಾದ ಜಾಥಾ ಮೈಲಾರ ಮಹದೇವಪ್ಪ ವೃತ್ತ, ಗಾಂಧಿ ವೃತ್ತ, ಎಂ.ಜಿ.ರಸ್ತೆ, ಮೇಲಿನಪೇಟೆ, ಸುಭಾಸ ವೃತ್ತ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಸಾರ್ವಜನಿಕರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಹಾಗೂ ಮಾಸ್ಕ್ ಧಾರಣೆ ಕುರಿತು ಜಾಗೃತಿ ಮೂಡಿಸಲಾಯಿತು.
ಇದೇ ಸಂದರ್ಭದಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಯಿತು ಹಾಗೂ ಉಚಿತವಾಗಿ ಮಾಸ್ಕ್ ವಿತರಣೆ ಮಾಡಲಾಯಿತು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್, ಡಿ.ವೈ.ಎಸ್.ಪಿ. ಶಂಕರ ಮಾರಿಹಾಳ, ಶಹರ ಪೊಲೀಸ್ ಠಾಣೆ ಸಿಪಿಐ ಪ್ರಹ್ಲಾದ ಚನ್ನಗಿರಿ, ಸಂಚಾರಿ ಪೊಲೀಸ್ ಠಾಣೆ ಪಿ.ಎಸ್.ಐ. ಬಿ.ಎ.ಬೆಟಗೇರಿ ಹಾಗೂ ಜಿ.ಬಿ.ನಾವಿ, ಆರ್.ಪಿ.ಐ ಮಾರುತಿ ಹೆಗಡೆ, ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ತಹಶೀಲ್ದಾರ ಗಿರೀಶ ಸ್ವಾದಿ, ನಗರಸಭೆ ಪೌರಾಯುಕ್ತ ಪರಶುರಾಮ ಚಲವಾದಿ ಇತರರು ಜಾಥಾದಲ್ಲಿ ಭಾಗವಹಿಸಿದ್ದರು.