ಮಾಸ್ಕ್ ಧರಿಸದವರಿಂದ ೨.೫೯ ಲಕ್ಷ ದಂಡ

ದಾವಣಗೆರೆ.ಮೇ.೫; ರಾಜ್ಯದಲ್ಲಿ ಕೊರೊನಾ ಕರ್ಫ್ಯೂ ಜಾರಿಯಲ್ಲಿದೆ. ಕರ್ಫ್ಯೂ ನಿಯಮ ಉಲ್ಲಂಘಿಸಿ ಜಿಲ್ಲೆಯಲ್ಲಿ ಮಾಸ್ಕ್ ಧರಿಸದೇ ಓಡಾಡಿದ 1,558 ಮಂದಿಯಿಂದ ಜಿಲ್ಲಾ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಒಟ್ಟು 2.59,800 ರೂಪಾಯಿ ದಂಡ ವಿಧಿಸಲಾಗಿದೆ.14 ದಿನ ಕರ್ಫ್ಯೂ ಜಾರಿಯಲ್ಲಿದ್ದರೂ ಜನರು ಮುಖ್ಯ ರಸ್ತೆ ಬಿಟ್ಟು ಒಳ ರಸ್ತೆಯಲ್ಲಿ ಅನಗತ್ಯವಾಗಿ ಸಂಚಾರ ನಡೆಸುತ್ತಿದ್ದಾರೆ. ಇದನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುವಂತಾಗಿದೆ. Attachments area