ಮಾಸ್ಕ್ ಧರಿಸದವರಿಗೆ ಅಧಿಕಾರಿಗಳ ದಂಡದೇಟು

ದಾವಣಗೆರೆ.ಏ.೧೮; ಕೋರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹನುಮಂತರಾಯ ನೇತೃತ್ವದ ಅಧಿಕಾರಿಗಳ ತಂಡ ಇಂದು ಬೆಳಗ್ಗೆ ನಗರದ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಮಾಸ್ಕ್ ಜಾಗೃತಿ ಅಭಿಯಾನ ನಡೆಸಿದರು.ಈ ವೇಳೆ ಮಾಸ್ಕ್ ಧರಿಸಿದ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರಿಗೆ ಸ್ಥಳದಲ್ಲೇ ದಂಡ ವಿಧಿಸಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಿದರು. ಬೆಳ್ಳಂ ಬೆಳಗ್ಗೆ ಮಾರುಕಟ್ಟೆಯಲ್ಲಿ ಅಭಿಯಾನ ಆರಂಭಿಸಿದ ವೇಳೆ ಮಾಸ್ಕ್ ಧರಿಸದವರಿಗೆ ದಂಡವಿಧಿಸಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಿದ್ದಾರೆ. ಈ ವೇಳೆ ದಂಡ ನೀಡದೇ ವಾಗ್ವಾದಕ್ಕೆ ಇಳಿದ ವ್ಯಾಪಾರಿಯ ಕೆನ್ನೆಗೆ ಬಾರಿಸಿ ಅರಿವು ಮೂಡಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ. ಮಾಸ್ಕ್ ಜಾಗೃತಿ ಅಭಿಯಾನದಲ್ಲಿ
ಪಾಲಿಕೆ ಕಮೀಷನರ್ ವಿಶ್ವನಾಥ್ ಮುದಜ್ಜಿ ಹಾಗೂ ಅಧಿಕಾರಿಗಳು ಇದ್ದರು.