ಮಾಸ್ಕ್ ಧರಿಸದವರಿಗೆ ಪುರಸಭೆಯಿಂದ ದಂಡ

ಕೆ.ಆರ್.ಪೇಟೆ:ಮಾ:30: ಪಟ್ಟಣದಲ್ಲಿ ಮಾಸ್ಕ್ ಧರಿಸದೇ ಓಡಾಡುತ್ತಿದ್ದ ಸಾರ್ವಜನಿಕರಿಗೆ ಪುರಸಭಾ ಅಧಿಕಾರಿಗಳು ದಂಡ ವಿಧಿಸುವ ಮೂಲಕ ಅವರಿಗೆ ಕೊರೋನಾ ಮಹಾಮಾರಿಯ ಪರಿಣಾಮಗಳ ಕುರಿತು ಅರಿವು ಮೂಢಿಸಿದರು.
ತಾಲ್ಲೂಕಿನಾದ್ಯಂತ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತವು ಜನರಿಗೆ ಮಾಸ್ಕ್ ಕಡ್ಡಾಯಗೊಳಿಸಿದ್ದು ಪಟ್ಟಣದ ಮುಖ್ಯ ರಸ್ತೆಯಲ್ಲಿ ಮಾಸ್ಕ್ ಧರಿಸದೇ ವಾಹನ ಚಲಾಯಿಸುತ್ತಿದ್ದ ವಾಹನ ಸವಾರರನ್ನು ನಿಲ್ಲಿಸಿ ಅವರಿಗೆ 100 ರೂಪಾಯಿಗಳ ದಂಡ ವಿಧಿಸಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಮನವಿ ಮಾಡಿದರು.
ಈ ಕುರಿತು ಮಾತನಾಡಿದ ಪುರಸಭಾ ಮುಖ್ಯಾಧಿಕಾರಿ ಸತೀಶ್‍ಕುಮಾರ್ ಮುಂದಿನ ದಿನಗಳು ಅಪಾಯಕಾರಿಯಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಹಲವಾರು ಕಟ್ಟುನಿಟ್ಟಿನ ನಿಯಮಗಳನ್ನು ಅಳವಡಿಸಿ ಅವುಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು ಕೊರೋನಾ ನಿಯಂತ್ರಣ ಮಾಡುವಲ್ಲಿ ಸಾರ್ವಜನಿಕರು ಪುರಸಭೆಯೊಂದಿಗೆ ಸಹಕರಿಸಬೇಕು ಹಾಗೂ ಮುಂದೆ ಯುಗಾದಿ ಹಬ್ಬ ಬರುತ್ತಿದ್ದು ನಿಮ್ಮ ಅಕ್ಕಪಕ್ಕದ ಮನೆಗಳಿಗೆ ಮಹಾರಾಷ್ಟ್ರ, ಕೇರಳ ಮುಂತಾದ ಹೊರ ರಾಜ್ಯಗಳಿಂದ ಯಾರಾದರೂ ಬಂದಿದ್ದರೆ ಆ ಮಾಹಿತಿಯನ್ನು ಕೂಡಲೇ ಆಶಾ ಕಾರ್ಯಕರ್ತೆಯರಿಗೆ ಅಥವಾ ತಾಲ್ಲೂಕು ಆಡಳಿತಕ್ಕೆ ತಿಳಿಸಲು ಸಾರ್ವಜನಿಕರಿಗೆ ಮನವಿ ಮಾಡಿದರು.