ಮಾಸ್ಕ್ ಧರಿಸದವರಿಗೆ 99,500 ದಂಡ ವಸೂಲಿ: ಎಸ್.ಪಿ

ಬೀದರ:ಮೇ.15: ಜಿಲ್ಲೆಯಲ್ಲಿ ಮಾಸ್ಕ್ ಧರಿಸದ 995 ಜನರ ವಿರೂದ್ಧ ದಂಡ ವಸುಲಿ ಮಾಡಿ ಸುಮಾರು 99,500 ರು.ದಂಡ ವಸುಲಿ ಮಾಡಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಡಿ.ಎಲ್.ನಾಗೇಶ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿ, ಮಾಸ್ಕ್ ಸರ್ಕಾರ ಈ ತಿಂಗಳ 10ರಿಂದ 24 ರ ವರೆಗೆ ಲಾಕಡೌನ್ (ನಿಷೇಧ) ವನ್ನು ಆದೇಶಿಸಿರುತ್ತಾರೆ. ಕೊರೊನಾ ವೈರಸ್ ಸೋಂಕು ಇತರರಿಗೆ ಹರಡದಂತೆ ತಡೆಯಲು ಕರ್ನಾಟಕ ಎಪಿಡೇಮಿಕ್ ಡೀಸಿಸ್ ಆಕ್ಟ್-2020 ಆದೇಶ ಉಲ್ಲಂಘಿಸಿದವರ ವಿರುದ್ಧ ಬೀದರ ಜಿಲ್ಲೆಯಲ್ಲಿ 02 ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ ಅವರು, ಸಾರ್ವಜನಿಕರು ಮನೆಯಲ್ಲಿಯೇ ಇರತಕ್ಕದ್ದು. ಅತ್ಯವಶ್ಯಕ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಗೆ ಬರತಕ್ಕದ್ದು ಎಂಬ ಆದೇಶವಿದ್ದರು ಸಹ ಜಿಲ್ಲೆಯಲ್ಲಿ ಅನಾವಶ್ಯಕವಾಗಿ ಸಂಚರಿಸಿದವರ 25 ವಾಹನಗಳನ್ನು ಜಪ್ತಿ ಮಾಡಿ ಕಾನೂನು ಪ್ರಕ್ರಿಯೆ ಕೈಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ಮುಂದೆ ಸಾರ್ವಜನಿಕರು ಲಾಕ್‍ಡೌನ್ ಆದೇಶ ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವದೆಂದು ಎಸ್.ಪಿ ಹೇಳಿದ್ದಾರೆ.