ಮಾಸ್ಕ್ ಧರಿಸದ 1547 ಜನರ ವಿರುದ್ಧ ಪ್ರಕರಣ ದಾಖಲು

ಬೀದರ: ಮೇ.29:ಕೊರೊನಾ ವೈರಸ್ ಸೋಂಕು ಇತರರಿಗೆ ಹರಡದಂತೆ ತಡೆಯಲು ಫೇಸ್ ಮಾಸ್ಕ್ ಹಾಕದವರಿಗೆ ಒಟ್ಟು 1547 ಪ್ರಕರಣಗಳು ಹಾಕಿ 1,54,700/-ರೂ. ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಡಿ.ಎಲ್.ನಾಗೇಶ ಹೇಳಿದ್ದಾರೆ.

ಸಾರ್ವಜನಿಕರು ಮನೆಯಲ್ಲಿಯೇ ಇರತಕ್ಕದ್ದು ಅತ್ಯವಶ್ಯಕ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಗೆ ಬರತಕ್ಕದ್ದು ಅಂತಾ ಆದೇಶವಿದ್ದರು ಸಹ ಜಿಲ್ಲೆಯಲ್ಲಿ ಅನಾವಶ್ಯಕವಾಗಿ ಸಂಚರಿಸಿದವರ 142 ವಾಹನಗಳನ್ನು ಜಪ್ತಿ ಮಾಡಿ ಕಾನೂನು ಪ್ರಕ್ರಿಯೆ ಕೈಕೊಳ್ಳಲಾಗಿದೆ.

ಇನ್ನೂ ಮುಂದೆ ಸಾರ್ವಜನಿಕರು ಲಾಕ್‍ಡೌನ್ ಆದೇಶ ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.