ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಳ್ಳಿ : ಶಾಸಕ ಪರಣ್ಣ ಮುನವಳ್ಳಿ

ಗಂಗಾವತಿ ಮೇ 02: ಕೊವಿಡ್ ನಿಯಂತ್ರಣಕ್ಕೆ ವಿಧಿಸಿರುವ ಲಾಕ್‌ಡೌನ್‌ನಿಂದಾಗಿ ಗಂಗಾವತಿ ನಗರದ ಸಂಪೂರ್ಣ ಸ್ಥಬ್ಧವಾಗಿದೆ. ಈ ನಡುವೆ ಬೆಳೆಗ್ಗೆ ೬ ರಿಂದ ೧೦ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಿದ್ದರಿಂದ ಎಪಿಎಂಸಿ ಪ್ರಾಂಗಣದಲ್ಲಿ ನಡೆಯುತ್ತಿರುವ ತರಕಾರಿ ಮಾರಾಟವನ್ನು ಶಾಸಕ ಪರಣ್ಣ ಮುನವಳ್ಳಿ ಪರಿಶೀಲಿಸಿದರು.
ಕೊವಿಡ್ ನಿಯಂತ್ರಣಕ್ಕಾಗಿ ಸರಕಾರ ಕಠಿಣ ನಿರ್ಧಾರ ಕೈಗೊಂಡಿದ್ದು, ಆರೋಗ್ಯ ಹಿತದೃಷ್ಟಿಯಿಂದ ಎಲ್ಲರು ನಿಯಮ ಪಾಲಿಸಬೇಕು ಮತ್ತು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಳ್ಳಿ ಎಂದು ಮನವಿ ಮಾಡಿದರು.
ಅಲ್ಲದೇ, ಮಾರುಕಟ್ಟೆ ಪ್ರದೇಶಕ್ಕೆ ಭೇಟಿ ನೀಡಿ ಜನರ ಸ್ಥಿತಿಗತಿಯನ್ನು ಖುದ್ದು ಪರಿಶೀಲಿಸಿದರು. ದೂರದ ಊರಿಗಳಿಂದ ತರಕಾರಿಯನ್ನು ತಂದು ಇಲ್ಲಿ ಸಗಟು ರಿತಿಯಲ್ಲಿ ಮಾರಲಾಗುತ್ತದೆ. ೧೦ ಗಂಟೆಯೊಳಗೆ ಮಾರಾಟ ಮುಕ್ತಾಯಗೊಳಿಸುತ್ತೇವೆ. ಆದರೂ ಕೆಲವು ಸಂದರ್ಭದಲ್ಲಿ ವಿಳಂಬವಾದರೆ ಕ್ರಮ ಕೈಗೊಳ್ಳದಂತೆ ಮತ್ತು ಶನಿವಾರ, ಭಾನುವಾರ ವ್ಯಾಪಾರ, ವಹಿವಾಟು ನಡೆಸುವಂತೆ ಅವಕಾಶ ಕಲ್ಪಿಸಿಕೊಡಿ ಎಂದು ವ್ಯಾಪಾರಸ್ಥರು ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಶಾಸಕ ಪರಣ್ಣ ಮುನುವಳ್ಳಿ, ಕೊವಿಡ್ ದಿನದಿಂದ ದಿನಕ್ಕೆ ಹೆಚ್ಚುತ್ತದೆ. ಇದರ ನಿಯಂತ್ರಣಕ್ಕಾಗಿಯೇ ಅಧಿಕಾರಿಗಳು ಸಾಕಷ್ಟು ಶ್ರಮಿಸುತ್ತಿದ್ದಾರೆ. ಅವಕಾಶ ಕಲ್ಪಿಸುವ ಕುರಿತು ಚರ್ಚಿಸುತ್ತೇನೆ ಎಂದರು. ನಗರ ಪೊಲೀಸ್ ಠಾಣೆ ಪಿಐ ವೆಂಕಟಸ್ವಾಮಿ ಇದ್ದರು.