ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ

ಬೀದರ.ಮಾ.31: ಜಿಲ್ಲೆಯಲ್ಲಿ ದಿನೇದಿನೆ ಕೋವಿಡ್-19ರ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮುಂಜಾಗ್ರತ ಕ್ರಮಗಳನ್ನು ಪಾಲನೆ ಮಾಡಬೇಕೆಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ಬೀದರ ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕೋವಿಡ್-19 ನಿಂದ ದೂರ ಇರಲು ಕಡ್ಡಾಯವಾಗಿ ಮಾಸ್ಕ್ ಬಳಸಬೇಕು. ಕೋವಿಡ್-19 ನಿಗ್ರಹಕ್ಕೆ ಮಾಸ್ಕ್ ರಾಮಬಾಣ ಇದ್ದಂತೆ. ಮಾಸ್ಕ್‍ನ ಈ ಪ್ರಯೋಜನೆಗಳನ್ನು ಅರಿತು ಪ್ರತಿಯೊಬ್ಬರೂ ಮಾಸ್ಕ್ ಬಳಕೆ ಮಾಡಬೇಕು. ಮಾಸ್ಕ್ ಧರಿಸದೇ ಇರುವವರ ಮೇಲೆ ದಂಡ ವಿಧಿಸಿ ಕ್ರಮ ವಹಿಸಲಾಗುತ್ತಿದೆ. ಜಿಲ್ಲೆಯ ಏಳು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೂಡ ಈಗಾಗಲೇ ದಂಡ ವಿಧಿಸಿ ಮಾಸ್ಕ್ ಬಳಸದೇ ಇರುವವರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.