ಮಾಸ್ಕ್ ಹಾಕದ 1304 ಜನರಿಗೆ ದಂಡ

ಬೀದರ:ಜೂ.9: ರಾಜ್ಯಾದ್ಯಂತ ಕೋವಿಡ್-19 ಸೋಂಕು ವ್ಯಾಪಕ ರೀತಿಯಲ್ಲಿ ಹರಡುತ್ತಿದ್ದು, ಈ ಸಾಂಕ್ರಾಮಿಕ ರೋಗ ತಡೆಯಲು ರಾಜ್ಯ ಸರ್ಕಾರ ಮೇ ತಿಂಗಳ 10ರಿಂದ ಜೂ.14ರ ವರೆಗೆ ಲಾಕಡೌನ್ ಆದೇಶಿಸಿರುತ್ತಾರೆ. ಕೊರೊನಾ ವೈರಸ್ ಸೋಂಕು ಇತರರಿಗೆ ಹರಡದಂತೆ ತಡೆಯಲು ಫೇಸ್ ಮಾಸ್ಕ್ ಹಾಕದವರಿಗೆ ಒಟ್ಟು 1304 ಪ್ರಕರಣಗಳು ಹಾಕಿ 1,30,400/-ರೂ. ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ನಾಗೇಶ ಡಿ.ಎಲ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಸಾರ್ವಜನಿಕರು ಮನೆಯಲ್ಲಿಯೇ ಇರತಕ್ಕದ್ದು. ಅತ್ಯವಶ್ಯಕ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಗೆ ಬರತಕ್ಕದ್ದು. ಅಂತ ಆದೇಶವಿದ್ದರು ಸಹ ಜಿಲ್ಲೆಯಲ್ಲಿ ಅನಾವಶ್ಯಕವಾಗಿ ಸಂಚರಿಸಿದವರ 147 ವಾಹನಗಳನ್ನು ಜಪ್ತಿ ಮಾಡಿ ಕಾನೂನು ಪ್ರಕ್ರಿಯೆ ಕೈಕೊಳ್ಳಲಾಗಿದೆ. ಇನ್ನೂ ಮುಂದೆ ಸಾರ್ವಜನಿಕರು ಲಾಕ್‍ಡೌನ್ ಆದೇಶ ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವದು ಎಂದವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.