ಮಾಸ್ಕ್ ಹಾಕದ 1463 ಜನರ ವಿರುದ್ಧ ದಂಡ

ಬೀದರ: ಜೂ.2:ರಾಜ್ಯಾದ್ಯಂತ ಕೋವಿಡ್-19 ಸೋಂಕು ವ್ಯಾಪಕ ರೀತಿಯಲ್ಲಿ ಹರಡುತ್ತಿದ್ದು, ಸದರಿ ಸಾಂಕ್ರಾಮಿಕ ರೋಗವನು ತಡೆಯಲು ರಾಜ್ಯ ಸರ್ಕಾರ 10-05-2021 ರಿಂದ 07-06-2021 ರ ವರೆಗೆ ಲಾಕಡೌನ್ (ನಿಷೇಧ) ವನ್ನು ಆದೇಶಿಸಿರುತ್ತಾರೆ.
ಕೊರೊನಾ ವೈರಸ್ ಸೋಂಕು ಇತರರಿಗೆ ಹರಡದಂತೆ ತಡೆಯಲು ಫೇಸ್ ಮಾಸ್ಕ್ ಹಾಕದವರಿಗೆ ಒಟ್ಟು 1463 ಪ್ರಕರಣಗಳು ಹಾಕಿ 1,46,300/-ರೂ. ದಂಡ ವಿಧಿಸಲಾಗಿದೆ.
ಸಾರ್ವಜನಿಕರು ಮನೆಯಲ್ಲಿಯೇ ಇರತಕ್ಕದ್ದು ಅತ್ಯವಶ್ಯಕ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಗೆ ಬರತಕ್ಕದ್ದು ಅಂತಾ ಆದೇಶವಿದ್ದರು ಸಹ ಜಿಲ್ಲೆಯಲ್ಲಿ ಅನಾವಶ್ಯಕವಾಗಿ ಸಂಚರಿಸಿದವರ 168 ವಾಹನಗಳನ್ನು ಜಪ್ತಿ ಮಾಡಿ ಕಾನೂನು ಪ್ರಕ್ರಿಯೆ ಕೈಕೊಳ್ಳಲಾಗಿದೆ. ಇನ್ನೂ ಮುಂದೆ ಸಾರ್ವಜನಿಕರು ಲಾಕ್‍ಡೌನ್ ಆದೇಶವನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವದುಎಂದವರು ಹೇಳಿದ್ದಾರೆ.