ಮಾಸ್ಕ್ ಹಾಕದ 1503 ಜನರ ವಿರೂದ್ಧ ಪ್ರಕರಣ: 1.50.300 ದಂಡ ವಸುಲಿ

ಬೀದರ:ಜೂ.3: ರಾಜ್ಯಾದ್ಯಂತ ಕೋವಿಡ್-19 ಸೋಂಕು ವ್ಯಾಪಕ ರೀತಿಯಲ್ಲಿ ಹರಡುತ್ತಿದ್ದು, ಈ ಸಾಂಕ್ರಾಮಿಕ ರೋಗ ತಡೆಯಲು ರಾಜ್ಯ ಸರ್ಕಾರ ಮೇ.10ರಿಂದ ಈ ತಿಂಗಳ 7ರ ವರೆಗೆ ಲಾಕಡೌನ್ ಘೋಸಿಸಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ನಾಗೇಶ ಡಿ.ಎಲ್ ಹೇಳಿದ್ದಾರೆ.
ಕೊರೊನಾ ವೈರಸ್ ಸೋಂಕು ಇತರರಿಗೆ ಹರಡದಂತೆ ತಡೆಯಲು ಫೇಸ್‍ಮಾಸ್ಕ್ ಹಾಕದ ಒಟ್ಟು 1503 ಪ್ರಕರಣಗಳು ಹಾಕಿ 1,50,300/-ರೂ. ದಂಡ ವಿಧಿಸಲಾಗಿದೆ. ಸಾರ್ವಜನಿಕರು ಮನೆಯಲ್ಲಿಯೇ ಇರತಕ್ಕದ್ದು, ಅತ್ಯವಶ್ಯಕ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಗೆ ಬರತಕ್ಕದ್ದು ಅಂತಾ ಆದೇಶವಿದ್ದರು ಸಹ ಜಿಲ್ಲೆಯಲ್ಲಿ ಅನಾವಶ್ಯಕವಾಗಿ ಸಂಚರಿಸಿದವರ 168 ವಾಹನಗಳನ್ನು ಜಪ್ತಿ ಮಾಡಿ ಕಾನೂನು ಪ್ರಕ್ರಿಯೆ ಕೈಕೊಳ್ಳಲಾಗಿದೆ. ಇನ್ನೂ ಮುಂದೆ ಸಾರ್ವಜನಿಕರು ಲಾಕ್‍ಡೌನ್ ಆದೇಶ ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಸ್.ಪಿ ಅವರು ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ.