ಮಾಸ್ಕ ಧರಿಸಿ ಕಾರ್ಯನಿರ್ವಹಿಸಲು ಡಿ.ಸಿ ಸೂಚನೆ

ಬೀದರ:ಸೆ.15: ಜಿಲ್ಲೆಯಲ್ಲಿ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಗೆ ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಕಚೇರಿ ಸಮಯದಲ್ಲಿ ಕಡ್ಡಾಯವಾಗಿ ಮಾಸ್ಕ ಧರಿಸಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‍ಆರ್ ಸರ್ಕಾರಿ ಕಚೇರಿಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ವಿವಿಧ ಕೆಲಸಕ್ಕಾಗಿ ಬಂದು ಹೋಗುತ್ತಿದ್ದು, ಕೋವಿಡ್-19 ಸೋಂಕು ಕಚೇರಿಯ ಸಿಬ್ಬಂದಿಗೂ ತಗುಲುವ ಸಾಧ್ಯತೆ ಇರುವುದರಿಂದ ಮಾಸ್ಕ ಧರಿಸಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಪ್ರಕಟಣೆ ಮೂಲಕ ಸೂಚಿಸಿದ್ದಾರೆ.