ಮಾಹಿತಿ ಆಯುಕ್ತ ರವೀಂದ್ರ ಗುರುನಾಥ ಟಾಕಪ್ಪ ಅಮಾನತಿಗೆ ಒತ್ತಾಯ

ರಾಯಚೂರು.ಅ.೧೩- ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದವರಿಗೆ ಮಾಹಿತಿ ಕೊಡುಸುವಲ್ಲಿ ಸಂಪೂರ್ಣ ವಿಫಲರಾಗಿ ಅಕ್ರಮ ಕೂಟದಲ್ಲಿ ಭಾಗಿಯಾದ ಭ್ರಷ್ಟ ಅಧಿಕಾರಿ ಕಲ್ಬುರ್ಗಿ ಪೀಠದ ಮಾಹಿತಿ ಆಯುಕ್ತ ರವೀಂದ್ರ ಗುರುನಾಥ ಟಾಕಪ್ಪ ಅವರನ್ನು ಸೇವೆಯಿಂದ ಅಮಾನತು ಮಾಡುವಂತೆ ಮಾಹಿತಿ ಹಕ್ಕುದಾರ ಅಳ್ಳಪ್ಪ ಅಮರಾಪೂರು ಅವರು ರಾಜ್ಯ ಸರಕಾರ ಒತ್ತಾಯಿಸಿದರು.
ಅವರಿಂದು ನಗರದ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಲಾದ ಅರ್ಜಿಗಳಿಗೆ ಸಕಾಲದಲ್ಲಿ ಮಾಹಿತಿ ನೀಡದ ಅಧಿಕಾರಿಗಳಿಗೆ ೨೫ ಸಾವಿರ ದಂಡ ವಿಧಿಸಬೇಕು. ಆದರೆ ಮಾಹಿತಿ ಆಯುಕ್ತ ರವೀಂದ್ರ ಗುರುನಾಥ ಟಾಕಪ್ಪ ಅವರು ಅಧಿಕಾರಿಗಳ ಜೊತೆ ಶಾಮೀಲು ಆಗಿ ನನಗೆ ಮಾಹಿತಿ ಕೊಡುಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ದೂರಿದರು.
ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ ನನಗೆ ಅಧಿಕಾರಿಗಳು ಮಾಹಿತಿ ನೀಡಿಲ್ಲ ಎಂದು ಆಯುಕ್ತರ ಬಳಿ ಚರ್ಚೆಸಿದಾಗ ಬೇಜವಾಬ್ದಾರಿಯಿಂದ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಿದರು. ನಾಲ್ಕು ದಿನ ವಿಚಾರಣೆ ಅವಧಿಯಲ್ಲಿ ಒಟ್ಟು ನನ್ನ ೩೯೫ ಅರ್ಜಿಗಳನ್ನು ತಿರಸ್ಕಾರ ಮಾಡಲಾಗಿದೆ ಎಂದು ಆರೋಪಿಸಿದರು.
ಅಧಿಕಾರಿಗಳ ಜೊತೆ ಸೇರಿ ಅಕ್ರಮಕೂಟದಲ್ಲಿ ಭಾಗಿಯಾಗಿರುವ ಇವರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಬೇಕು ಯೋಗ ಅಧಿಕಾರಿಗಳನ್ನು ನೇಮಕ ಮಾಡುವಂತೆ ರಾಜ್ಯ ಸರಕಾರ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಶರಣು ಹೂಗಾರ ಸೇರಿದಂತೆ ಉಪಸ್ಥಿತರಿದ್ದರು.