ಮಾ. ೧೧ ಇಡಿ ಎದುರು ಕವಿತಾ ಹಾಜರು

ನವದೆಹಲಿ,ಮಾ.೯- ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಮಾರ್ಚ್ ೧೧ ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಪುತ್ತಿ ಕೆ ಕವಿತಾ ಹೇಳಿದ್ದಾರೆ.
ಇಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿತ್ತು. ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವಂತೆ ಒತ್ತಾಯಿಸಿ ಆಯೋಜಿಸಿರುವ ಪ್ರತಿಭನೆಯಲ್ಲಿ ಪಾಲ್ಗೊಳ್ಳಲಿರುವ ಹಿನ್ನೆಲೆಯಲ್ಲಿ ನಾಡಿದ್ದು ವಿಚಾರಣೆಗೆ ಹಾಜರಾಗುವುದಾಗಿ ಅವರು ತಿಳಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣ ಸಂಬಂದ ಕೆ ಕವಿತಾ ಕಾನೂನು ತಂಡ ಸಂಪರ್ಕಿಸಿದ ಬಳಿಕ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರುತನಿಖಾ ಸಂಸ್ಥೆಯೊಂದಿಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ಹೇಳಿದ್ದಾರೆ
“ಜಂತರ್ ಮಂತರ್‌ನಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಮತ್ತು ಮಹಿಳಾ ಸಂಘಟನೆಗಳೊಂದಿಗೆ ನಾಳೆ ಧರಣಿ ಹಮ್ಮಿಕೊಳ್ಳಲಾಗಿದೆ. ಅದಾದ ಬಳಿಕ ಹಾಜರಾಗುವುದಾಗಿ ತಿಳಿಸಿದ್ದಾರೆ.
ತಮ್ಮ ತಂದೆ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಹೋರಾಟದ ವಿರುದ್ಧದ ಬೆದರಿಕೆ ತಂತ್ರಗಳಿಗೆ ಮಣಿಯುವುದಿಲ್ಲ. ಕಾನೂನಿನ ಪ್ರಕಾರ ಸೂಕ್ತ ಉತ್ತರ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
“ದಕ್ಷಿಣ ಗುಂಪಿನ” ಪ್ರಮುಖ ಆರೋಪಿ ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರನ್ ಪಿಳ್ಳೈ ಅವರನ್ನು ಎದುರಿಸಲು ಕವಿತಾ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ಮಾರ್ಚ್ ೧೨ ರವರೆಗೆ ಇಡಿ ಪಿಳ್ಳೈ ಅವರ ಕಸ್ಟಡಿಯನ್ನು ಹೊಂದಿದೆ. ಮಾರ್ಚ್ ೧೩ ರಂದು ಅವರನ್ನು ಮತ್ತೆ ದೆಹಲಿ ನ್ಯಾಯಾಲಯಕ್ಕೆ ಹಾಜರುಪಡಿಸಲು ನಿರ್ಧರಿಸಲಾಗಿದೆ.