
ರಾಯಚೂರು,ಮಾ.೧೭- ರಾಯಚೂರು ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಒಕ್ಕೂಟ ವತಿಯಿಂದ ಮಾರ್ಚ್ ೧೯ ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರದಾನ ಕಾರ್ಯದರ್ಶಿ ಡಿ.ಕೆ. ಮುರಳಿಧರ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ,ಮೇಳವನ್ನು ನಗರದ ವೀರಶೈವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆ ವರೆಗೆ ಉದ್ಯೋಗ ಮೇಳ ನಡೆಯುತ್ತದೆ ಎಂದ ಅವರು, ಪ್ರತಿಯೊಂದು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರುವುದರಿಂದ ಈ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ ೧೨೦ ಕ್ಕೂ ಹೆಚ್ಚು ಖಾಸಗಿ ಶಿಕ್ಷಣ ಸಂಸ್ಥೆಗಳು ಭಾಗವಹಿಸಲಿವೆ.ಈ ಮೇಳವನ್ನು ಕಿಲ್ಲೇ ಬೃಹನ್ಮಠದ ಶಂತಾಮಲ್ಲ ಶಿವಾಚಾರ್ಯ ಮಹಾಸ್ವಾಮಿಗಳು ಉದ್ಘಾಟಿಸಲಿದ್ದಾರೆ.ಅಧ್ಯಕ್ಷತೆಯನ್ನು ಶರಣಗೊಲಪ ನಾಡಗೌಡ ಅವರು ವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ರಾಯಚೂರು ತಾಲೂಕು ಅಧ್ಯಕ್ಷ ಎಸ್.ಎಲ್.ಕೇಶವರೆಡ್ಡಿ,ವಿಜಯ ರಾಜೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.