ಮಾ.೯ ರಂದು‌ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶ

ದಾವಣಗೆರೆ.ಮಾ.೭:  ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶ ಮಾ. 9 ರಂದು ಮಾಯಕೊಂಡ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ತ್ಯಾವಣಿಗೆಯಲ್ಲಿ ನಡೆಯಲಿದೆ ಎಂದು ಒಬಿಸಿ ಮೋರ್ಚಾ ಅಧ್ಯಕ್ಷ ಕೆ. ಬಸವರಾಜಪ್ಪ ತಿಳಿಸಿದರು.ಸುದ್ದಿಗೋಷ್ಠಿ‌ಯಲ್ಲಿ ಈ ವಿಷಯ ತಿಳಿಸಿದ ಅವರು, ಮಾ.೯ ರಂದು ಮಧ್ಯಾಹ್ನ ೩ ಗಂಟೆಗೆ ನಡೆಯುವ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಸಂಸದ ಡಾ. ಜಿ.ಎಂ. ಸಿದ್ದೇಶ್ವರ, ಶಾಸಕ ರಾದ ಎಂ.ಪಿ. ರೇಣುಕಾಚಾರ್ಯ, ಪ್ರೊ. ಎನ್. ಲಿಂಗಣ್ಣ, ಎಸ್. ಎ. ರವೀಂದ್ರನಾಥ್, ಮಾಜಿ ಶಾಸಕರಾದ ಬಿ.ಪಿ. ಹರೀಶ್, ಎಂ. ಬಸವರಾಜ ನಾಯ್ಕ, ಎಲ್ಲ ಮೋರ್ಚಾ ಅಧ್ಯಕ್ಷ ರು, ಪದಾಧಿಕಾರಿಗಳು ಇತರರು ಸೇರಿದಂತೆ 8- 10 ಸಾವಿರದಷ್ಟು ಜನರು ಭಾಗವಹಿಸುವರು ಎಂದು ತಿಳಿಸಿದರು.ರಾಜ್ಯದಲ್ಲಿ ಕನಿಷ್ಠ ಮೂವತ್ತು ಕ್ಷೇತ್ರದಲ್ಲಿ ಟಿಕೆಟ್ ನೀಡಬೇಕು ಎಂದು ಚರ್ಚಿಸ ಲಾಗಿದೆ. ದಾವಣಗೆರೆ ದಕ್ಷಿಣದಲ್ಲಿ ಹಿಂದುಳಿದ ವರ್ಗದವರಿಗೆ ಟಿಕೆಟ್ ನೀಡಬಹುದು ಎಂದರು.ಸುದ್ದಿಗೋಷ್ಠಿಯಲ್ಲಿದೇವೇಂದ್ರಪ್ಪ, ಮಹೇಂದ್ರ ಹೆಬ್ಬಾಳು, ಓಂಕಾರಪ್ಪ, ಎಂ.ಎನ್. ಮಂಜುನಾಥ್, ಸುರೇಶ್ ಇದ್ದರು.