ಮಾ.1ರಿಂದ ಸರ್ಕಾರಿ ನೌಕರರ ಮುಷ್ಕರ


ಸಂಜೆವಾಣಿ ವಾರ್ತೆ
ಸಂಡೂರು :ಫೆ:26 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ತಾಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಸೌಲಭ್ಯ ಜಾರಿ ಒತ್ತಾಯಿಸಿ ಕರ್ತವ್ಯಕ್ಕೆ ಗೈರು ಹಾಜರಾಗಿ ಅನಿರ್ಧಿಷ್ಟಾವಧಿ ಮುಷ್ಕರ  ನಡೆಸಲಾಗುವುದು ಎಂದು ತಾಲೂಕು ನೌಕರರ ಸಂಘದ ಅಧ್ಯಕ್ಷ ಚೌಗಳಿ ಪರಶುರಾಮ ತಿಳಿಸಿದರು.
ಅವರು ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, 2023-24ನೇ ಸಾಲಿನ ಅಯ-ವ್ಯಯದಲ್ಲಿ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಪ್ರಸ್ತಾವವಾಗಿಲ್ಲ, 7ನೇ ವೇತನ ಅಯೋಗದ ಸೌಲಭ್ಯಗಳನ್ನು ಜಾರಿಗೊಳಿಸಬೇಕಾಗಿತ್ತು ಅದು ಯಶಸ್ವಿಯಾಗಿಲ್ಲ ನಿವೃತ ಕಾರ್ಯದರ್ಶಿ ಸುಧಾಕರ್ ರಆವ್ ಅವರ ಅಧ್ಯಕ್ಷತೆಯಲ್ಲಿ ಅಯೋಗ ರಚಿಸಿದ್ದು ವಿಸ್ತೃತ ವರದಿಯನ್ನು ಸಿದ್ದಪಡಿಸಿ ಸಲ್ಲಿಸಿದ್ದರೂ ಕ್ರಮವಾಗಿಲ್ಲ, ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದ್ದು ಅದಕ್ಕೆ ತಕ್ಕಂತೆ ನೌಕರರ ಬದುಕು ಸಾಗಿಸುವುದು ದುಸ್ತರವಾಗುತ್ತಿದೆ. ಅದ್ದರಿಂದ ರಾಜ್ಯ ಸರ್ಕಾರಿ ನೌಕರರ 1.07.2022 ರಿಂದ ಪರಿಷ್ಕೃತ ವೇತನ ಭತ್ಯೆಗಳಿಗೆ ಅರ್ಹರಾಗಿದ್ದು 6ನೇ ವೇತನ ಅಯೋಗದ ಮಾದರಿಯಂತೆ 7ನೇ ವೇತನ ಅಯೋಗದಿಂದ ಶೀಘ್ರವಾಗಿ ಮಧ್ಯಂತರ ಸೌಲಭ್ಯವನ್ನು 40% ಪಿಟ್ ಮೆಂಟ ನೀಡಬೇಕು, ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓಪಿಎಸ್ ವ್ಯಾಪ್ತಿಗೆ ತರಬೇಕು ಎಂದು ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರ ಮಾಡುವುದಾಗಿ ತಿಳಿಸಿದರು.