
ಕೋಲಾರ,ಮಾ,೨:ವೇತನ ಆಯೋಗ ಜಾರಿ, ಎನ್‌ಪಿಎಸ್ ರದ್ದತಿಗೆ ಆಗ್ರಹಿಸಿ ರಾಜ್ಯಸರ್ಕಾರಿ ನೌಕರರ ಸಂಘ ಮಾ.೧ ರಿಂದ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರವನ್ನು ಯಶಸ್ವಿಗೊಳಿಸುವುದಾಗಿ ನಗರದ ನೌಕರರ ಭವನದಲ್ಲಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ಅಧ್ಯಕ್ಷತೆಯಲ್ಲಿ ನಡೆದ ವಿವಿಧ ವೃಂದ ಸಂಘಗಳ ಪದಾಧಿಕಾರಿಗಳ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ಕೈಗೊಂಡಿದ್ದು, ಶಾಲೆ,ಕಾಲೇಜು, ಆಸ್ಪತ್ರೆ,ಕಚೇರಿಗಳು ಬಂದ್ ಆಗಲಿವೆ ಎಂದು ತಿಳಿಸಿದರು.
ಮುಷ್ಕರಕ್ಕೆ ಪೂರ್ವಭಾವಿಯಾಗಿ ಕರೆದಿದ್ದ ವಿವಿಧ ಇಲಾಖೆಗಳ ವೃಂದ ಸಂಘದ ಸಭೆಯಲ್ಲಿ ಮಾತನಾಡಿದ ಸುರೇಶ್‌ಬಾಬು, ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ ಅವರು ಸ್ಪಷ್ಟವಾಗಿ ತಿಳಿಸಿದ್ದು, ನಮ್ಮ ಎರಡೂ ಬೇಡಿಕೆ ಈಡೇರಿಕೆಗೆ ಸ್ಪಷ್ಟ ಭರವಸೆ, ಆದೇಶ ಸಿಗದ ಹೊರತೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ತಿಳಿಸಿದ್ದಾರೆ ಎಂದರು.
ಸಭೆಯಲ್ಲಿ ಶಿಕ್ಷಕ ಗೆಳೆಯರ ಬಳಗದ ಅಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲೆಯ ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ಟಿ.ಕೆ.ನಟರಾಜ್, ಆರೋಗ್ಯ ಇಲಾಖೆ ಸಂಘದ ಅಧ್ಯಕ್ಷೆ ವಿಜಯಮ್ಮ, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಪ್ಪ, ಸಹಶಿಕ್ಷಕರ ಸಂಘದ ಅಧ್ಯಕ್ಷ ಶಿವಕುಮಾರ್, ಸಂಘಗಳ ಪದಾಧಿಕಾರಿಗಳು ಇದ್ದರು.