ಮಾ.12 6ನೇ ಕನ್ನಡ ಸಾಹಿತ್ಯ ಸಮ್ಮೇಳನ

ಚನ್ನಪಟ್ಟಣ,ಮಾ.೧೦- ಚನ್ನಪಟ್ಟಣ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮಾ.೧೨ರಂದು ೬ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಗರದ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಗಾಂಧಿಭವನದಿಂದ ವಿವಿಧ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ಹೊರಟು ಎಂ.ಜಿ.ರಸ್ತೆ ಮೂಲಕ ಮತ್ತು ಅಂಚೆ ಕಛೇರಿ ರಸ್ತೆ ಮೂಲಕ ಟಿ.ಕೆ.ರಾಮರಾವ್ ಮಹಾದ್ವಾರದ ಶತಮಾನೋತ್ಸವ ಭವನ ತಲುಪಲಿದೆ. ಧ್ವಜಾರೋಹಣವನ್ನು ತಾಲ್ಲೂಕಿನ ದಂಡಾಧಿಕಾರಿ ಮಹೇಂದ್ರ ನೆರವೇರಿಸಲಿದ್ದು, ಕನ್ನಡ ಧ್ವಜವನ್ನು ಕಸಾಪ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್, ಪರಿಷತ್ ಧ್ವಜವನ್ನು ತಾಲ್ಲೂಕು ಕಸಾಪ ಅಧ್ಯಕ್ಷ ಶ್ರೀನಿವಾಸ ರಾಂಪುರ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಶಿವಕುಮಾರ್, ನಗರಸಭೆ ಆಯುಕ್ತ ಸಿ.ಪುಟ್ಟಸ್ವಾಮಿ, ನಗರಸಭೆ ಅಧ್ಯಕ್ಷ ಪಿ.ಪ್ರಶಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎನ್.ಮರಿಗೌಡ, ಆರಕ್ಷಕ ವೃತ್ತ ನಿರೀಕ್ಷಕಿ ಶೋಭರವರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮ ನಾಡಗೀತೆ ಮತ್ತು ರೈತಗೀತೆಯೊಂದಿಗೆ ಆರಂಭವಾಗಿ ಉದ್ಘಾಟನೆಯನ್ನು ಶಾಸಕ ಹೆಚ್.ಡಿ.ಕುಮಾರಸ್ವಾಮಿ ನೆರವೇರಿಸಲಿದ್ದು, ಪುಸ್ತಕ ಬಿಡುಗಡೆಯನ್ನು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮಾಡಲಿದ್ದು, ಪುಸ್ತಕ ಮಳಿಗೆಯನ್ನು ಉದ್ಯಮಿ ಪ್ರಸನ್ನ ಪಿ.ಗೌಡ ಉದ್ಘಾಟಿಸಲಿದ್ದು, ಆಶಯ ನುಡಿಯನ್ನು ಕಸಾಪ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್ ಆಡಲಿದ್ದು, ಮುಖ್ಯಭಾಷಣವನ್ನು ಜಾನಪದ ವಿದ್ವಾಂಸ ಡಾ.ಚಕ್ಕೆರೆ ಶಿವಶಂಕರ್ ಮಾಡಲಿದ್ದು, ಸಮ್ಮೇಳನಾಧ್ಯಕ್ಷರ ಭಾಷಣವನ್ನು ಸೀಬನಹಳ್ಳಿ ಪಿ.ಸ್ವಾಮಿ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಿವೈಎಸ್‌ಪಿ ಮೋಹನ್‌ಕುಮಾರ್, ಎಎಪಿ ನಾಯಕ ಶರತ್‌ಚಂದ್ರ, ಕೇಂದ್ರ ಕಸಾಪ ಕೋಶಾಧ್ಯಕ್ಷ ಬಿ.ಎಂ.ಪಟೇಲ್ ಪಾಂಡು, ಕಸಾಪ ಜಿಲ್ಲಾಧ್ಯಕ್ಷ ಸು.ತ.ರಾಮೇಗೌಡ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.