ಮಾ.18 ರಂದು “ಆಯುಕ್ತರ ನಡೆ ವಾರ್ಡ್ ಕಡೆ”

ಕಲಬುರಗಿ,ಮಾ.15:ಕಲಬುರಗಿ ನಗರದ ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ “ಆಯುಕ್ತರ ನಡೆ ವಾರ್ಡ್ ಕಡೆ” ಕಾರ್ಯಕ್ರಮವನ್ನು ಇದೇ ಮಾರ್ಚ್ 18 ರಂದು ಕಲಬುರಗಿ ಮಹಾನಗರ ಪಾಲಿಕೆಯ ವ್ಯಾಪ್ತಿಯ ವಾರ್ಡ್ ನಂ. 4 ಕ್ಕೆ ಸಂಬಂಧಿಸಿದಂತೆ ಖಾನ್ ಕಾಲೋನಿಯ ಉದ್ಯಾನವನದಲ್ಲಿ ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಯೋಜಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸದರಿ ವಾರ್ಡ್‍ನ ಸಾರ್ವಜನಿಕರು ತಮ್ಮ ಕುಂದುಕೊರತೆಗಳು ಇದ್ದಲ್ಲಿ ಮೇಲ್ಕಂಡ ದಿನದಂದು ಉಪಸ್ಥಿತರಿದ್ದು ಸ್ಥಳದಲ್ಲಿಯೇ ತಮ್ಮ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.