ಮಾ. 26ರಂದು ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯ ಜಯಂತಿ: ಅರ್ಥಪೂರ್ಣ ಆಚರಣೆ

ಚಿತ್ರದುರ್ಗ.ಮಾ.೨೪; ಜಿಲ್ಲಾಡಳಿತದ ವತಿಯಿಂದ ಇದೇ ಮಾರ್ಚ್ 26ರಂದು ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಕಚೇರಿ ತಹಶೀಲ್ದಾರ್ ರಾಜೇಶ್ ಕುಮಾರ್ ಹೇಳಿದರು.ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಿಸುವ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇದೇ ಮಾರ್ಚ್ 26ರಂದು ಬೆಳಿಗ್ಗೆ 11ಕ್ಕೆ ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಶಿಷ್ಠಾಚಾರದ ಅನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ, ಗಣ್ಯರನ್ನು ಆಹ್ವಾನಿಸಲಾಗುವುದು. ಸಮಾಜದ ಎಲ್ಲರೂ ಭಾಗವಹಿಸಿ ಜಯಂತಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.