ಕಲಬುರಗಿ,ಮಾ.23:ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಯಮಿತ (ಹಿಂದಿನ ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ) ದಿಂದ ರೈತರ ತರಬೇತಿ ಕೇಂದ್ರದ ಕಟ್ಟಡ ಉದ್ಘಾಟನೆ ಹಾಗೂ ದ್ವಿದಳ ಧಾನ್ಯಗಳ ಸಂಸ್ಕರಣಾ ಘಟಕದ ಶಂಕುಸ್ಥಾಪನಾ ಸಮಾರಂಭವನ್ನು ಮಾರ್ಚ್ 26 ರಂದು ರವಿವಾರ ಬೆಳಿಗ್ಗೆ 10.30 ಗಂಟೆಗೆ ಕಲಬುರಗಿಯ ಜೇವರ್ಗಿ ರಸ್ತೆಯ ಕೋಟನೂರ (ಡಿ)ಯ ಸೇರ್ವೇ ನಂ. 14/1 ರಲ್ಲಿ ಜರುಗಲಿದೆ.
ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಮುರುಗೇಶ ಆರ್. ನಿರಾಣಿ ಅವರು ರೈತರ ತೆರಬೇತಿ ಕೇಂದ್ರದ ಕಟ್ಟಡವನ್ನು ಉದ್ಘಾಟಿಸುವರು. ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ ರೇವೂರ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಸಂಸ್ಕರಣಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸುವರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಹಾಗೂ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಹಾಗೂ ಬೀದರ ಸಂಸದರಾದ ಭಗವಂತ ಖೂಬಾ ಅವರು ಘನ ಉಪಸ್ಥಿತಿವಹಿಸುವರು. ಭಾರತ ಸರ್ಕಾರದ ಎ.ಪಿ.ಇ.ಡಿ.ಎ. (ಂPಇಆಂ) ವಾಣಿಜ್ಯ ಇಲಾಖೆಯ ಅಧ್ಯಕ್ಷ ಡಾ. ಎಂ. ಅಂಗಮುತ್ತು ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಜೇವರ್ಗಿ ಶಾಸಕರು ಹಾಗೂ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯಸಿಂಗ್, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ ಪಾಟೀಲ್ ಸೇಡಂ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ-ಯಾದಗಿರಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರು ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಶಾಸಕರು ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಹಾಗೂ ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಿ. ಜಾಧವ ಅವರು ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ವಿಧಾನಸಭೆ ಶಾಸಕರುಗಳಾದ ಪ್ರಿಯಾಂಕ ಖರ್ಗೆ, ಎಂ.ವೈ.ಪಾಟೀಲ, ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮಡು, ಖನೀಜ್ ಫಾತೀಮಾ, ಡಾ. ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ಸಾಬಣ್ಣ ತಳವಾರ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದ್ರಕಾಂತ ಜಿ. ಪಾಟೀಲ (ಚಂದು ಪಾಟೀಲ), ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಧರ್ಮಣ್ಣ ದೊಡ್ಡಮನಿ, ಕಲಬುರಗಿ ನೀರಾವರಿ ಯೋಜನೆಗಳ ವಲಯದ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹರ್ಷವರ್ಧನ್ ಗುಂಡಪ್ಪ ಗುಗಳೆ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅವಿನಾಶ ಕುಲಕರ್ಣಿ, ನಂದಿಕೂರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ವೇತಾ ದಿನೇಶ ದೊಡ್ಡಮನಿ, ಕೃಷಿ ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಸಿ. ಕಳಸದ, ಕೃಷಿ ಇಲಾಖೆ ಆಯುಕ್ತ ಶರತ್ ಬಿ., ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ. ಫಹೀಮ್, ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕ ಅನುಪಮ್ ಅಗ್ರವಾಲ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ., ಕಲಬುರಗಿ ನಗರ ಪೊಲೀಸ್ ಆಯುಕ್ತ ಚೇತನ್ ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್, ಮಹಾನಗರ ಪಾಲಿಕೆ ಆಯುಕ್ತ ಪಾಟೀಲ ಭುವನೇಶ ಪಾಟೀಲ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿ ಆನಂದ ಪ್ರಕಾಶ ಮೀನಾ, ರಾಯಚೂರ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಹನುಮಂತಪ್ಪ, ಬೆಂಗಳೂರಿನ ಎ.ಪಿ.ಇ.ಡಿ.ಎ. (ಂPಇಆಂ) ಪ್ರಧಾನ ವ್ಯವಸ್ಥಾಪಕ ಆರ್. ರವೀಂದ್ರ ಹಾಗೂ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.