ಮಾ. 27 ರಂದು ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ಕಲಬುರಗಿ,ಮಾ.24:ಕಲಬುರಗಿ ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕ ಎ.ಆರ್.ಕರ್ನೂಲ್ ಹಾಗೂ ಪೊಲೀಸ್ ಉಪಾಧೀಕ್ಷಕ ಸಿದ್ದಲಿಂಗಪ್ಪಗೌಡ ಪಾಟೀಲ್ ಅವರು ಇದೇ ಮಾರ್ಚ್ 27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕಲಬುರಗಿ ನಗರದ ಜಗತ್ ಸರ್ಕಲ್ ಹತ್ತಿರವಿರುವ ಮಹಾನಗರ ಪಾಲಿಕೆಯ ಟೌನ್‍ಹಾಲ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ನ್ಯಾಯ ಸಮ್ಮತ ಕೆಲಸಗಳಿಗೆ ವಿಳಂಬ ಮಾಡುತ್ತಿರುವ ಸರ್ಕಾರಿ ಅಧಿಕಾರಿ/ ಸಿಬ್ಬಂದಿಗಳ ವಿರುದ್ಧ ದೂರು ಸ್ವೀಕರಿಸಲಾಗುತ್ತದೆ. ಸರ್ಕಾರಿ ಕಚೇರಿಗಳಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಿ, ಭ್ರಷ್ಟ್ರಾಚಾರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಸಾಧ್ಯವಾದಲ್ಲಿ ಸ್ಥಳದಲ್ಲಿಯೇ ದೂರುದಾರರ ಅಹವಾಲನ್ನು ಬಗೆಹರಿಸಲಾಗುವುದು. ಸಾರ್ವಜನಿಕರು ಕುಂದುಕೊರತೆಗಳಿದ್ದಲ್ಲಿ ಮೇಲ್ಕಂಡ ದಿನದಂದು ನಿಗದಿಪಡಿಸಿದ ಸಮಯಕ್ಕೆ ಹಾಜರಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಕಚೇರಿ, ಐವಾನ್ ಶಾಹಿ, ಕಂಪೌಂಡ್, ಕಲಬುರಗಿ-585102 ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ-08472-295364ಗೆ ಸಂಪರ್ಕಿಸಲು ಕೋರಲಾಗಿದೆ.