ಮಾ. 28 ರಂದು ರಾಜ್ಯದ ಮುಖ್ಯಮಂತ್ರಿಗಳಿಂದಕಲಬುರಗಿ ಮೆಗಾ ಟೆಕ್ಸ್‍ಟೈಲ್ ಪಾರ್ಕ್‍ಗೆ ಚಾಲನೆ

ಕಲಬುರಗಿ,ಮಾ.27:ಕೇಂದ್ರ ಸರ್ಕಾರದ ಪಿಎಂ-ಮಿತ್ರ ಯೋಜನೆಯಡಿ ಮಂಜೂರಾಗಿರುವ ಕಲಬುರಗಿ ಮೆಗಾ ಟೆಕ್ಸ್‍ಟೈಲ್ ಪಾರ್ಕ್‍ಗೆ ಮಾರ್ಚ್ 28 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕರ ವ್ಯವಹಾರಗಳು ಹಾಗೂ ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಜವಳಿ ಸಚಿವರಾದ ಪೀಯುಶ್ ಗೋಯಲ್ ಅವರು ಕಲಬುರಗಿ ನಗರದ ಐವಾನ್ ಶಾಹಿ ಪ್ರದೇಶದಲ್ಲಿರುವ ಪಿಡಿಎ ಇಂಜನಿಯರಿಂಗ್ ಕಾಲೇಜಿನ ಅಡಿಟೋರಿಯಂದಲ್ಲಿ ಚಾಲನೆ ನೀಡುವರು.

ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳು ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ, ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವ ನಿರ್ಮಲಾ ಸೀತಾರಾಮನ್, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸರ್ಕಾರದ ರೈಲ್ವೆ ಮತ್ತು ಜವಳಿ ಖಾತೆ ರಾಜ್ಯ ಸಚಿವ ದರ್ಶನ ವಿ. ಜದೋಶ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ, ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವ ಕು. ಶೋಭಾ ಕರಂದ್ಲಾಜೆ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ, ಕೇಂದ್ರ ಸರ್ಕಾರದ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಮುರುಗೇಶ ಆರ್. ನಿರಾಣಿ ಹಾಗೂ ಕೈಮಗ್ಗ ಮತ್ತು ಜವಳಿ ಹಾಗೂ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ್ ಬಿ. ಪಾಟೀಲ್ ಮುನೇನಕೊಪ್ಪ ಘನ ಉಪಸ್ಥಿತಿವಹಿಸುವರು.
ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ ರೇವೂರ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.
ಜೇವರ್ಗಿ ಶಾಸಕರು ಹಾಗೂ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯಸಿಂಗ್, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ ಪಾಟೀಲ್ ಸೇಡಂ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ-ಯಾದಗಿರಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರು ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಿ. ಜಾಧವ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ವಿಧಾನಸಭೆ ಶಾಸಕರುಗಳಾದ ಪ್ರಿಯಾಂಕ ಖರ್ಗೆ, ಎಂ.ವೈ.ಪಾಟೀಲ, ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮಡು, ಖನೀಜ್ ಫಾತೀಮಾ, ಡಾ. ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ಸಾಬಣ್ಣ ತಳವಾರ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದ್ರಕಾಂತ ಜಿ. ಪಾಟೀಲ (ಚಂದು ಪಾಟೀಲ), ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ವಿಶಾಲ ದರ್ಗಿ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಧರ್ಮಣ್ಣ ದೊಡ್ಡಮನಿ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ವಿದ್ಯಾಸಾಗರ ಎ. ಶಹಾಬಾದಿ, ಕಲಬುರಗಿ ನೀರಾವರಿ ಯೋಜನೆಗಳ ವಲಯದ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹರ್ಷವರ್ಧನ್ ಗುಂಡಪ್ಪ ಗುಗಳೆ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅವಿನಾಶ ಕುಲಕರ್ಣಿ, ಕೇಂದ್ರ ಸರ್ಕಾರದ ಜವಳಿ ಮಂತ್ರಾಲಯದ ಕಾರ್ಯದರ್ಶಿ ರಚನಾ ಷಾ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.