ಕಲಬುರಗಿ,ಮಾ.27:ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ಕೇಂದ್ರ ಕಚೇರಿ ವತಿಯಿಂದ ಸೇಡಂ ನೂತನ ಬಸ್ ನಿಲ್ದಾಣ ಹಾಗೂ ನೂತನ ಬಸ್‍ಗಳ ಲೋಕಾರ್ಪಣೆ ಸಮಾರಂಭವು ಮಾರ್ಚ್ 28 ರಂದು ಮಂಗಳವಾರ ಬೆಳಿಗ್ಗೆ 11.30 ಗಂಟೆಗೆ ಸೇಡಂ ತಾಲೂಕು ಕ್ರೀಡಾಂಗಣದಲ್ಲಿ ಜರುಗಲಿದೆ.
ರಾಜ್ಯದ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮಲು ಅವರು ಸೇಡಂ ನೂತನ ಬಸ್ ನಿಲ್ದಾಣ ಹಾಗೂ ನೂತನ ಬಸ್‍ಗಳ ಲೋಕಾರ್ಪಣೆ ಮಾಡುವರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಹಾಗೂ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಹಾಗೂ ಬೀದರ ಸಂಸದರಾದ ಭಗವಂತ ಖೂಬಾ ಅವರು ಘನ ಉಪಸ್ಥಿತಿವಹಿಸುವರು.
ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಮುರುಗೇಶ ಆರ್. ನಿರಾಣಿ, ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಸಚಿವರಾದ ಜೆ.ಸಿ. ಮಧುಸ್ವಾಮಿ ಹಾಗೂ ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ಗೋವಿಂದ ಕಾರಜೋಳ ಅವರು ಗೌರವ ಉಪಸ್ಥಿತಿ ವಹಿಸುವರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ-ಯಾದಗಿರಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರು ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.
ಜೇವರ್ಗಿ ಶಾಸಕರು ಹಾಗೂ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯಸಿಂಗ್, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ ಪಾಟೀಲ್ ಸೇಡಂ, ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ ರೇವೂರ ಹಾಗೂ ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಿ. ಜಾಧವ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ವಿಧಾನಸಭೆ ಶಾಸಕರುಗಳಾದ ಪ್ರಿಯಾಂಕ ಖರ್ಗೆ, ಎಂ.ವೈ.ಪಾಟೀಲ, ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮಡು, ಖನೀಜ್ ಫಾತೀಮಾ, ಡಾ. ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ಸಾಬಣ್ಣ ತಳವಾರ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದ್ರಕಾಂತ ಜಿ. ಪಾಟೀಲ (ಚಂದು ಪಾಟೀಲ), ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಧರ್ಮಣ್ಣ ದೊಡ್ಡಮನಿ, ಕಲಬುರಗಿ ನೀರಾವರಿ ಯೋಜನೆಗಳ ವಲಯದ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹರ್ಷವರ್ಧನ್ ಗುಂಡಪ್ಪ ಗುಗಳೆ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ವಿದ್ಯಾಸಾಗರ ಎ. ಶಾಬಾದಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮಂಡಳಿ ನಿರ್ದೇಶಕ ಮಲ್ಲಿಕಾರ್ಜುನ ತಡಕಲ್, ಸೇಡಂ ಪುರಸಭೆ ಅಧ್ಯಕ್ಷೆ ಶೋಭಾ ಶರಣಪ್ಪ ಹೂಗಾರ, ಸಾರಿಗೆ ಮತ್ತು ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಎನ್.ವ್ಹಿ. ಪ್ರಸಾದ ಹಾಗೂ ಕಲಬುರಗಿ ವಿಭಾಗ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.