ಮಾ. 30 ರಂದು ವಿಶ್ವ ಕ್ಷಯರೋಗ ದಿನಾಚರಣೆ

ಕಲಬುರಗಿ,ಮಾ.28:ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಘಟಕ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮ-2023ನ್ನು ಇದೇ ಮಾರ್ಚ್ 30 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಹಳೆಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ ಅವರು ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಬುರಗಿ ವಿಭಾಗದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಸಹ ನಿರ್ದೇಶಕ ಡಾ. ಶಂಕ್ರೆಪ್ಪ ಮೈಲಾರಿ ಹಾಗೂ ಕಲಬುರಗಿ ವಿಭಾಗದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಉಪನಿರ್ದೇಶಕ ಡಾ. ಶರಣಬಸಪ್ಪ ಗಣಜಲ್‍ಖೇಡ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಲಬುರಗಿ ವಿಭಾಗೀಯ ವಿಶ್ವ ಸಂಸ್ಥೆಯ ಸಲಹೆಗಾರ (ಕ್ಷಯ) ಡಾ. ಸಿದ್ದಾರ್ಥ ಸೇಲ್ವಂ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಶೇಖರ ಮಾಲಿ ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು. ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞರು ಹಾಗೂ ಅಧೀಕ್ಷಕ ಡಾ. ಅಂಬರಾಯ ರುದ್ರವಾಡಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ವಿಭಾಗೀಯ ವಿಶ್ವ ಸಂಸ್ಥೆಯ ಸಲಹೆಗಾರರು (ಕ್ಷಯ) ಡಾ. ಸತೀಶ ಘಾಟಗೆ ಉಪನ್ಯಾಸ ನೀಡುವರು. “ಹೌದು! ನಾವು ಕ್ಷಯರೋಗವನ್ನು ಕೊನೆಗೊಳಿಸಬಹುದು” ಎಂಬ ಈ ವರ್ಷದ ಘೋಷಣೆಯೊಂದಿಗೆ ವಿಶ್ವ ಕ್ಷಯರೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
ಜಾಥಾಕ್ಕೆ ಚಾಲನೆ: ವಿಶ್ವ ಕ್ಷಯ ರೋಗ ದಿನಾಚರಣೆ ಅಂಗವಾಗಿ ಇದಕ್ಕೂ ಮುನ್ನ ಅಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಲಬುರಗಿ ವಿಭಾಗದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಸಹ ನಿರ್ದೇಶಕ ಡಾ. ಶಂಕ್ರೆಪ್ಪ ಮೈಲಾರಿ ಅವರು ಜಾಥಾಕ್ಕೆ ಚಾಲನೆ ನೀಡುವರು.
ಕಲಬುರಗಿ ವಿಭಾಗದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಉಪನಿರ್ದೇಶಕ ಡಾ. ಶರಣಬಸಪ್ಪ ಗಣಜಲ್‍ಖೇಡ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಶೇಖರ ಮಾಲಿ ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು. ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞರು ಹಾಗೂ ಅಧೀಕ್ಷಕ ಡಾ. ಅಂಬರಾಯ ರುದ್ರವಾಡಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.