ಮಾ. 5 ರಂದು ರೇವಗ್ಗಿಯ ಶ್ರೀ ರೇಣುಕಾಚಾರ್ಯರಜಯಂತ್ಯೋತ್ಸವ ಅಂಗವಾಗಿ ರಥೋತ್ಸವ

ಕಲಬುರಗಿ.ಮಾ.03:ಶ್ರೀ ರೇಣುಕಾಚಾರ್ಯರ ಜಯಂತ್ಯೋತ್ಸವ ಅಂಗವಾಗಿ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಶ್ರೀಕ್ಷೇತ್ರ ರೇವಗ್ಗಿ (ರಟಕಲ್) ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಮಾರ್ಚ್ 5 ರಂದು ರವಿವಾರ ಸಂಜೆ 5 ಗಂಟೆಗೆ ಭವ್ಯ ರಥೋತ್ಸವ ಕಾರ್ಯಕ್ರಮ ಜರುಗಲಿದೆ ಎಂದು ಸೇಡಂ ಸಹಾಯಕ ಆಯುಕ್ತರು ಹಾಗೂ ರೇವಗ್ಗಿ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ರಥೋತ್ಸವದ ಪೂರ್ವಭಾವಿಯಾಗಿ ಶನಿವಾರ ಮಾರ್ಚ್ 4ರ ರಾತ್ರಿ 9 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ದೇವಸ್ಥಾನದಲ್ಲಿ ಖ್ಯಾತ ಆಕಾಶವಾಣಿ ಕಲಾವಿದರಿಂದ ಸಂಗೀತ ಕಾರ್ಯಕ್ರಮ ಜರುಗಲಿದೆ. ಎಲ್ಲಾ ಭಕ್ತಾಧಿಗಳು ರಥೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ತಿಳಿಸಿದ್ದಾರೆ.