
ಸಂಜೆವಾಣಿ ವಾರ್ತೆ
ಸಂಡೂರು: ಮಾ: 4:ಮಾರ್ಚ್.8ರಂದು ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ತಾಲೂಕು ಮಟ್ಟದ ಕ್ರಿಕೇಟ್ ಟೋರ್ನ್ ಮೆಂಟ್‍ನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸ್ತ್ರೀಶಕ್ತಿ ಭವನ, ಪಶುವೈದ್ಯ ಆಸ್ಪತ್ರೆಯ ಹತ್ತಿರ ಈ ಪಂದ್ಯಾವಳಿಯನ್ನು ಅಯೋಜಿಸಲಾಗಿದೆ. ತಂಡದವರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಮೊಬೈಲ್ ಸಂಖ್ಯೆ: 7795565422 ಸಂಪರ್ಕಿಸಬಹುದು. ಮಹಿಳಾ ದಿನಾರಣೆಯ ಅಂಗವಾಗಿ ನಡಯುವ ಟೋರ್ನ ಮೆಂಟ್‍ನಲ್ಲಿ 19 ವರ್ಷ ವಯಸ್ಸಿನೊಳಗಿನ ಹೆಣ್ಣು ಮಕ್ಕಳು ಪಂದ್ಯಾವಳಿಯಲ್ಲಿ ಭಾಗವಹಿಸಬಹುದು.
ಪಂದ್ಯಾವಳಿ ವಿಷಯದ ಬಗ್ಗೆ ಪೂರ್ವಭಾವಿ ಸಭೆಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಷಡಾಕ್ಷರಯ್ಯ ಹೆಚ್. ಇವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಕಛೇರಿಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಸಹಾಯಕ ನಿರ್ದೇಶಕ ಸಮಾಜ ಕಲ್ಯಾಣ ಇಲಾಖೆಯ ಎನ್.ಕೆ. ವೆಂಕಟೇಶ್, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾಋಇ ರವಿಕುಮಾರ ಕಡ್ಲೆಬಾಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಎಳೆ ನಾಗಪ್ಪ ಎಂ.ಎಂ. ಭಜಂತ್ರಿ ತಾಲೂಕ ದೈಹಿಕ ಪರಿವಿಕ್ಷಕ ಶಿಕ್ಷಕ ಷಣ್ಮುಖಪ್ಪ ಉಪಸ್ಥಿತರಿದ್ದರು.
One attachment • Scanned by Gmail