ಮಾ.8 ರಂದು ಮಹಿಳೆಯರಿಗೆ ಕ್ರಿಕೆಟ್ ಪಂದ್ಯಾವಳಿ


ಸಂಜೆವಾಣಿ ವಾರ್ತೆ
ಸಿರುಗುಪ್ಪ, ಮಾ.06: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ್ 8ರಂದ 19 ವರ್ಷದೊಳಗಿನ ವಿವಿಧ ಮಹಿಳಾ ಸ್ವಸಹಾಯ ಗುಂಪಿನ ಸದಸ್ಯೆಯರು, ಕಾಲೇಜು ವಿದ್ಯಾರ್ಥಿನಿಯರು, ನರೇಗಾ ಮಹಿಳಾ ಕೂಲಿಕಾರ್ಮಿಕರಿಗೆ ಕ್ರಿಕೆಟ್ ಪಂದ್ಯಾವಳಿಯನ್ನು ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಹಯೋಗದಲ್ಲಿ ಪಂದ್ಯಾವಳಿ ನಡೆಯಲಿವೆ ಎಂದು ತಾಲೂಕು ಪಂಚಾಯಿತಿ ಇ.ಒ. ಎಂ.ಬಸಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

One attachment • Scanned by Gmail