ಮಾ. 9 ರಂದು ಎಸ್.ಪಿ.ಎ.ಆರ್. ಪ್ರತಿಷ್ಠಾನದಿಂದ  ವಿವಿಧ ಉಚಿತ ಸ್ಪರ್ಧೆಗಳಿಗೆ ಆಹ್ವಾನ

ಸಂಜೆವಾಣಿ ವಾರ್ತೆ

ದಾವಣಗೆರೆ, ಫೆ.19; ದಾವಣಗೆರೆಯ ಶ್ರೀಮತಿ ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದಿಂದ ಅವಕಾಶವಂಚಿತ ಪ್ರತಿಭಾವಂತ ಮಕ್ಕಳಿಗೆ ಮಹಿಳೆಯರಿಗೆ ಅವರುಗಳಲ್ಲಿರುವ ಸೂಕ್ತವಾದ ಪ್ರತಿಭೆಗಳನ್ನು ಅನಾವರಣಗೊಳಿಸಲು ಮುಕ್ತವಾದ ವೇದಿಕೆ ಕಲ್ಪಿಸುವ ಸದುದ್ದೇಶದಿಂದ ಉಚಿತವಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಡಾ. ನಲ್ಲೂರು ಅರುಣಾಚಲ ಎನ್.ರೇವಣಕರ್ ತಿಳಿಸಿದ್ದಾರೆ. ಮಾ 9 ರಂದು  ಅಪರಾಹ್ನ 3-30 ಗಂಟೆಯಿAದ ದಾವಣಗೆರೆಯ ವಿನೋಬಾನಗರದ 1ನೇ ಮುಖ್ಯ ರಸ್ತೆಯಲ್ಲಿರುವ ಶ್ರೀಮತಿ ಗೌರಮ್ಮ ನರಹರಿಶೇಟ್ ಮಿನಿ ಸಭಾಂಗಣದಲ್ಲಿ ನಡೆಯಲಿರುವ ಸಮೂಹಗೀತೆ ಸ್ಪರ್ಧೆ, ಆಕರ್ಷಕ ಗೃಹಿಣಿ ಸ್ಪರ್ಧೆ, ಮಕ್ಕಳಿಗೆ, ಮಹಿಳೆಯರಿಗೆ ಜಾಣ ಗಣಿತ, ಜಾಣ ಒಗಟು, ರಸಪ್ರಶ್ನೆ, ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸುವವರು 1-3-2024ರೊಳಗೆ 9481722376 ಈ ವ್ಯಾಟ್ಸಪ್ ಸಂಖ್ಯೆಗೆ ಹೆಸರು ನೊಂದಾಯಿಸಬೇಕಾಗಿ ಪ್ರತಿಷ್ಠಾನದ ನಿರ್ದೇಶಕರಾದ ನಲ್ಲೂರು ಲಕ್ಷö್ಮಣ್‌ರಾವ್ ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಪ್ರತಿಷ್ಠಾನದ ಗೌರವ ಸಲಹೆಗಾರರಾದ ಸಾಲಿಗ್ರಾಮ ಗಣೇಶ್ ಶೆಣೈ 9538732777 ಇವರನ್ನು ಸಂಪರ್ಕಿಸಬಹುದು.