ಮಾ. 9 ರಂದು ಬೃಹತ್ ಲೋಕ ಆದಾಲತ್:ನ್ಯಾ.ಎಸ್.ಕೆ.ಕನಕಟ್ಟೆ

ಬೀದರ:ಫೆ. 22: ಗೌರವಾನ್ವಿತ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಮಾರ್ಚ 09 ರಂದು ಬೀದರ ಜಿಲ್ಲೆಯಲ್ಲಿ ಬೃಹತ್ ಲೋಕ ಅದಾಲತನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಸ್.ಕೆ.ಕನಕಟ್ಟೆ ಹೇಳಿದರು.
ಅವರು ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಆಸ್ತಿಪಾಲು ವಿಭಾಗ ಜೀವನಾಂಶ, ಚೆಕ್ ಬೌನ್ಸ, ವಿದ್ಯುತ್ ಪ್ರಕರಣಗಳು ಕಂದಾಯ ಅಪರಾಧಿಕ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವಂತಹ ಪ್ರಕರಣಗಳು, ಕಾರ್ಮಿಕರ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಮಾಡಲು ಅವಕಾಶ ಇರುತ್ತದೆ. ಇದರ ಸದುಪಯೋಗವನ್ನು ಜಿಲ್ಲೆಯ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಹೇಳಿದರು.
ಈ ಹಿಂದೆ 2023ರಲ್ಲಿ ನಾಲ್ಕು ರಾಷ್ಟ್ರೀಯ ಲೋಕ ಅದಾಲತಗಳನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯಾದ್ಯಾಂತ ಒಟ್ಟು (ಪೆಂಡಿಂಗನಲ್ಲಿನ) 7844 ಪ್ರಕರಣಗಳು ಮತ್ತು ವ್ಯಾಜ್ಯಪೂರ್ವ ಪ್ರಕರಣಗಳಲ್ಲಿ 82941 ಪ್ರಕರಣಗಳು ನಾಲ್ಕು ರಾಷ್ಟ್ರೀಯ ಲೋಕಆದಲಾತನಲ್ಲಿ ಇತ್ಯರ್ಥಗೊಳಿಸಲಾಗಿದ್ದು. ಒಟ್ಟು 2023 ರ ಲೋಕ ಅದಾಲತನಲ್ಲಿ 90,785 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. 2023ರ ನಾಲ್ಕು ರಾಷ್ಟ್ರೀಯ ಲೋಕ ಅದಾಲತನಲ್ಲಿ ಒಟ್ಟು ಮೊತ್ತ 73,71,53,801 ರೂ. ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ ಹಾಗೂ ಜಿಲ್ಲೆಯಾದ್ಯಾಂತ 2023 ರ ಲೋಕ ಆದಾಲತನಲ್ಲಿ ಒಟ್ಟು 18 ಜೋಡಿಗಳು ರಾಜಿ ಸಂಧಾನದ ಮೂಲಕ ಒಂದಾಗಿರುತ್ತಾರೆ ಎಂದು ಹೇಳಿದರು.
ಈ ಬಾರಿಯ ಲೋಕ ಅದಾಲತನಲ್ಲಿ ನ್ಯಾಯಾಲಯದಲ್ಲಿ ಬಾಕಿ(ಪೇಂಡಿಂಗ) ಇರುವ ಪ್ರಕರಣಗಳನ್ನು ಹೆಚ್ಚು ಹೆಚ್ಚು ಇತ್ಯಾರ್ಥಗೊಳಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆಲ್ಲ ಮಾಧ್ಯಮಗಳು ಹೆಚ್ಚು ಹೆಚ್ಚು ಪ್ರಚಾರವನ್ನು ಸಾರ್ವಜನಿಕರಿಗೆ ನೀಡಬೇಕು. ಕಳೆದ ಲೋಕ ಅದಾಲತಗಿಂತ ಈ ಬಾರಿಯ ಲೋಕ ಅದಾಲತನಲ್ಲಿ ಹೆಚ್ಚು ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ ಗುರಿ ಹೊಂದಲಾಗಿದೆ. ದಿನಾಂಕ 20.02.2024 ರ ಪ್ರಕಾರ ನಮ್ಮ ಜಿಲ್ಲೆಯಲ್ಲಿ ಒಟ್ಟು 30,830 ಪ್ರಕರಣಗಳು ಪೆಂಡಿಂಗ ಇದ್ದು. ಹೆಚ್ಚು ಪ್ರಕರಣಗಳನ್ನು ರಾಜಿ ಸಂದಾನ ಮಾಡುವ ಗುರಿ ಹೊಂದಿದ್ದೇವೆ. ಪ್ರಕರಣ ರಾಜಿ ಮಾಡಿಕೊಳ್ಳುವುದರಿಂದ ಕಕ್ಷಿದಾರನಿಗೆ ನ್ಯಾಯಲಯ ಶುಲ್ಕ ವಾಪಸ್ ಸಿಗಲಿದೆ ಮೇಲ್ಮನವಿ ಮಾಡಲು ಅವಕಾಶ ಇರುವುದಿಲ್ಲ ಇಬ್ಬರೂ ಪಕ್ಷಗಾರರು ತಮ್ಮ ದ್ವೇಷ ಮರೆತು ಸುಮಧುರ ಬಾಂಧವ್ಯ ಹೊಂದುವ ಈ ಲೋಕ ಆದಾಲತನಲ್ಲಿ ಅವಕಾಶ ಇರುತ್ತದೆಂದರು.
ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಪ್ರಕರಣ ವಿಲೆವಾರಿಗೊಳಿಸುವ ಗುರಿ ಇದ್ದು, ಮಾರ್ಚ 9 ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ರಾಷ್ಟ್ರೀಯ ಲೋಕ ಆದಾಲತ್ ನಡೆಯಲಿದ್ದು ಜಿಲ್ಲೆಯ ಹೆಚ್ಚಿನ ಜನರು ಈ ಲೋಕ ಆದಾಲತನಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಜಗದಿಶ್ವರ ದೊರೆ, ಆಕಾಶ ಸಜ್ಜನ, ರಾಹುಲ, ಜೀವನ, ಯೋಹನ ಸೇರಿದಂತೆ ಇತರರು ಉಪಸ್ಥಿತರಿದ್ದರು.