
ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ನಿರ್ಮಾಪಕ ಹಾಗು ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವುದರಲ್ಲಿ ಸದಾ ಮುಂದಿರುವ ನಿರ್ಮಾಪಕ ಮಂಜುನಾಥ್ ಡಿ. ಅವರು ” ಅನ್ ಲಾಕ್ ರಾಘವ” ಚಿತ್ರದ ಬಳಿಕ ಮತ್ತೊಂದು ಹೊಸ ಚಿತ್ರ ನಿರ್ಮಾಣ ಕೈಗೆತ್ತಿಕೊಂಡಿದ್ದಾರೆ.
ಮಿಲಿಂದ್ ಗೌತಮ್ ನಾಯಕನಾಗಿ ನಟಿಸುತ್ತಿರುವ ಈ ನೂತನ ಚಿತ್ರವನ್ನು ಪ್ರಕಟಿಸಿದ್ದು ಕಿಚ್ಚ ಸುದೀಪ್ ಅವರ ಹುಟ್ಡುಹಬ್ಬದ ದಿನವಾದ ಸೆಪ್ಟಂಬರ್ 2 ರಂದು ಚಿತ್ರದ ಶೀರ್ಷಿಕೆ ಸೇರಿದಂತೆ ಇನ್ನಿತರೆ ಮಾಹಿತಿ ನೀಡಲು ತಂಡ ಮುಂದಾಗಿದೆ.
ನಿರ್ಮಾಪಕ ಮಂಜುನಾಥ್ ಅವರು ಅನ್ ಲಾಕ್ ರಾಘವ ನಂತರ ಮತ್ತೊಂದು ಪ್ರಯೋಗಕ್ಕೆ ಮುಂದಾಗಿದ್ದಾರೆ. ಈ ಚಿತ್ರವನ್ನು ಡಿಜೆ ಚಂದ್ರಚೂಡ್ ಚಕ್ರವರ್ತಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಮಿಲಿಂದ್ ಗೌತಮ್ ನಾಯಕ ನಟರಾಗಿರುವ ಈ ಸಿನೆಮಾಗೆ ನಿರ್ದೇಶಕರ ಕ್ಯಾಪ್ ತೊಟ್ಟಿರುವುದು ಬಹುಮುಖ ಪ್ರತಿಭೆ ಡಿ. ಜೆ. ಚಕ್ರವರ್ತಿ ಬಿಗ್ ಬಾಸ್ ಖ್ಯಾತಿ, ಚಳುವಳಿ, ಬರಹಗಾರ, ನಿರ್ದೇಶಕ ಚಕ್ರವರ್ತಿ ಏಳು ವರ್ಷಗಳ ನಂತರ ನಿರ್ದೇಶನ ಮಾಡುತ್ತಿದ್ದಾರೆ. “ಅನ್ ಲಾಕ್ ರಾಘವ” ನಂತರ ಮಿಲಿಂದ್ ಗೌತಮ್ ಅವರು ಸತತ ಮೂರು ತಿಂಗಳುಗಳಿಂದ ಈ ಹೊಸ ಚಿತ್ರಕ್ಕಾಗಿ ತಯಾರಿ ನಡೆಸುತ್ತಿದ್ದಾರೆ.
ಮಣಿಕಾಂತ್ ಕದ್ರಿ ಸಂಗೀತ, ಮಧು ತುಂಬನಕೆರೆ ಸಂಕಲನ, ಯೋಗೇಶ್ವರನ್ ಛಾಯಾಗ್ರಹಣ, ಕಾರ್ಯಕಾರಿ ನಿರ್ಮಾಪಕರಾಗಿ ಪ್ರಶಾಂತ್ ಬಾಗೂರು, ಡಿಜಿಟಲ್ ಮಾರ್ಕೆಟಿಂಗ್ ಸುನೀಲ್ ಮಾನೆ, ಸಹ ನಿರ್ದೇಶಕರಾಗಿ ಚಂದ್ರಶೇಖರ ಮುದಬಾವಿ ಮುಂತಾದವರ ತಂಡವಿದೆ.
ಈಗಾಗಲೇ ಕದ್ರಿ ಮಣಿಕಾಂತ್ ಹಾಡುಗಳು ಸಂಯೋಜನೆಯಲ್ಲಿದು, ಚಿತ್ರೀಕರಣಕ್ಕೆ ಪೂರ್ವ ತಯಾರಿ ಭರದಿಂದ ಸಾಗಿದೆ. ಚಿತ್ರದ ಪೋಸ್ಟರ್ ನಲ್ಲಿರುವ ಸ್ಕ್ಯಾನ್ ಮಾಡಿ ಮ್ಯಾಜಿಕ್ ನೋಡಿ ನಿಮಗೊಂದು ಅಪರೂಪದ ವಿಷಯ ಸಿಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.