ಮಿಲಿಟರಿ ಆಸ್ಪತ್ರೆಗಳು ಕೋವಿಡ್ ಆಸ್ಪತ್ರೆಗಳಾಗಿ ಮಾರ್ಪಾಡು : ಸಚಿವ ಜೋಶಿ

ಹುಬ್ಬಳ್ಳಿ ಏ 30 : ಕೇಂದ್ರದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ರಾಜ್ಯದಲ್ಲಿನ ಮಿಲಿಟರಿ ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆಗಳನ್ನಾಗಿ ಮಾರ್ಪಡಿಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಹುಬ್ಬಳ್ಳಿ ಕಿಮ್ಸ್ ಆವರಣದಲ್ಲಿ ಶೀಘ್ರವಾಗಿ ನಿರ್ಮಿಸಲಾಗುತ್ತಿರುವ 66 ಬೆಡ್ ಗಳ ಕೋವಿಡ್ ಕ್ಯಾಜ್ಯಯಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಆರ್.ಡಿ.ಓ ಹಾಗೂ ಇತರೆ ರಕ್ಷಣಾ ಏಜನ್ಸಿಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮೇಕ್ ಶಿಫ್ಟ್ (ತ್ವರಿತವಾಗಿ ನಿರ್ಮಿಸು) ಕೋವಿಡ್ ಆಸ್ಪತ್ರೆಗಳನ್ನು ನಿರ್ಮಿಸುವಂತೆ ರಕ್ಷಣಾ ಸಚಿವರಿಗೆ ಪತ್ರ ಬರೆದಿದ್ದೇನೆ. ಈ ಕುರಿತು ರಕ್ಷಣಾ ಸಚಿವರು ನಿರ್ಣಯ ಕೈಗೊಳ್ಳುವರು ಎಂಬ ಆಶಾಭಾವವಿದೆ. ಯುದ್ದೋಪಾದಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋವಿಡ್ ನಿರ್ವಹಣೆ ಮಾಡುತ್ತಿವೆ. ಮುಜಾಗೃತವಾಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಬೆಡ್ ಗಳನ್ನು ತಯಾರು ಮಾಡಲಾಗುವುದು. ಈವುಗಳನ್ನು ಬಳಸುವ ಪರಿಸ್ಥಿತಿ ಬಾರದಿರಲಿ ಎಂದು ಆಶಿಸುತ್ತೇನೆ.
ದೇಶದಲ್ಲಿ ಇಂದು 2500 ಹೆಚ್ಚು ವೈರಲ್ ಲ್ಯಾಬರೋಟರಿಗಳಿವೆ. ಹುಬ್ಬಳ್ಳಿ ಕಿಮ್ಸ್, ಧಾರವಾಡ ಜಿಲ್ಲಾ ಆಸ್ಪತ್ರೆ ಹಾಗೂ ಡಿಮಾನ್ಸ್ ನಲ್ಲಿ ಟೆಸ್ಟಿಂಗ್ ಲ್ಯಾಬ್ ಗಳಿವೆ. ಧಾರವಾಡ ಜಿಲ್ಲೆಯಲ್ಲಿ 17 ಸಂಚಾರಿ ಸ್ಯಾಬ್ ಸೆಂಟರ್ ಗಳಿವೆ. ಎಲ್ಲಿಯಾದರೂ ತೊಂದರೆಯಾಗಿದ್ದರೆ ಸರಿಪಡಿಸಲಾಗುವುದು. ಧಾರವಾಡ ಜಿಲ್ಲೆಗೆ ಹೊರ ಜಿಲ್ಲೆಗಳಿಂದ ಆಗಮಿಸಿದವರ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಹಳ್ಳಿಗಳಲ್ಲಿ ಕೂಡ ಡಂಗುರ ಸಾರಿಸಿ ಹೊರ ಜಿಲ್ಲೆಯಿಂದ ಬಂದವರನ್ನು ಪ್ರತ್ಯೇಕವಾಸದಲ್ಲಿ ಇಡಲಾಗುತ್ತಿದೆ.
10 ದಿನದಲ್ಲಿ ನಿರ್ಮಾಣಗೊಳ್ಳಿದೆ ಕೋವಿಡ್ ಕ್ಯಾಜುಯಲಿಟಿ ಆಸ್ಪತ್ರೆ
ಕಿಮ್ಸ್ ಆಸ್ಪತ್ರೆ ಆರಣದಲ್ಲಿ 66 ಬೆಡ್ ಗಳ ಕೋವಿಡ್ ಕ್ಯಾಜುಯಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ಆಕ್ಸಿಜನ್ ಸೌಲಭ್ಯವನ್ನು ಸಹ ರೋಗಿಗಳಿಗೆ ನೀಡಲಾಗಿವುದು. ಜಿಲ್ಲಾಧಿಕಾರಿಗಳು ಈ ವಿಚಾರವಾಗಿ ಕಾರ್ಯಾದೇಶವನ್ನು ಸಹ ನೀಡಿದ್ದಾರೆ. ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಏ.28 ರಂದು ಬೆಂಗಳೂರನಲ್ಲಿ 20 ಸಾವಿರಕ್ಕೂ ಅಧಿಕ ಹಾಗೂ ಧಾರವಾಡ ಜಿಲ್ಲೆಯಲ್ಲಿ 600 ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿವೆ. ಎರಡನೇ ರೂಪಾಂತರ ವೈರಸ್ ರಾಜ್ಯ ಪ್ರವೇಶಿಸಿದರೆ ಬಹಳಷ್ಟು ತೊಂದರೆಯಾಗಲಿದೆ ಎಂಬ ಭಯ ಕಾಡುತ್ತಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಆರೋಗ್ಯ ಸೌಲಭ್ಯಗಳನ್ನು ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 3000 ಕ್ಕೂ ಹೆಚ್ಚು ಬೆಡ್ ಗಳನ್ನು ತಯಾರು ಮಾಡಲಾಗುತ್ತಿದೆ ಎಂದರು.
ನಿರ್ಮಿತಿ ಕೇಂದ್ರದಿಂದ 66 ಲಕ್ಷ ವೆಚ್ಚದಲ್ಲಿ ಕೋವಿಡ್ ಕ್ಯಾಜುಯಲಿಟಿ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಇಕೋ ಇನ್ ಬಾಕ್ಸ್ ಸ್ಪೇಸ್ ಪ್ರೇವ್ಹೇಟ್ ಲಿಮಿಟೆಡ್ ವತಿಯಿಂದ ನಿರ್ಮಾಣ ಕಾಗಮಾರಿ ಕೈಗೊಳ್ಳಲಾಗುತ್ತಿದೆ. ಒಟ್ಟು 1500 ಚದುರ ಮೀಟರ್ ವಿಸ್ತೀರ್ಣದ ಮೂರು ಕ್ಯಾಜುಯಾಲಿಟಿ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ. ವಿದ್ಯುತ್ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳ ಕಲ್ಪಿಸಲಾಗುತ್ತಿದೆ. ಪ್ರತಿ ಕೇಂದ್ರ 22 ಹಾಸಿಗೆಗಳ ಸಾಮಾರ್ಥ್ಯ ಹೊಂದಿದೆ. ಇದರೊಟ್ಟಿಗೆ ಮಹಿಳೆಯರು ಹಾಗೂ ಪುರುಷರಿಗಾಗಿ ಪ್ರತ್ಯೇಕವಾಗಿ 250 ಚದುರ ಮೀಟರ್ ವಿಸ್ತೀರ್ಣದಲ್ಲಿ 6 ಬಾತ್ ರೂಮ್ ಹಾಗೂ 6 ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಚಿವ ಜೋಶಿ ನುಡಿದರು.