
ಸಂಜೆವಾಣಿ ವಾರ್ತೆ
ದಾವಣಗೆರೆ,ಆ.8: ತೀವ್ರಗೊಂಡ ಮಿಷನ್ ಇಂದ್ರಧನುಷ್ 5.0 ಅಭಿಯಾನಕ್ಕೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಮ್ಮ ಗೃಹ ಕಚೇರಿಯಲ್ಲಿ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.ಮಿಷನ್ ಇಂದ್ರಧನುಷ್ ಲಸಿಕೆಯನ್ನು ಆಗಸ್ಟ್ 12 ರವರೆಗೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರಗಳಲ್ಲಿ ಹಾಕಲಾಗುತ್ತದೆ. ಗರ್ಭಧಾರಣೆ ಸಮಯದಿಂದ ಮಗು ಹುಟ್ಟಿದಾಗ ಮತ್ತು ನಂತರದಲ್ಲಿ ಮಗುವಿಗೆ ಸಿಗಬೇಕಾದ ಲಸಿಕೆ ಸಿಗದಿದ್ದಲ್ಲಿ ಅಂತಹ 5 ವರ್ಷದೊಳಗಿನ ಮಗುವಿಗೆ ಇಂದ್ರಧನುಷ್ ಲಸಿಕೆ ಹಾಕಲಾಗುತ್ತದೆ.ಜಿಲ್ಲೆಯಲ್ಲಿ ಇಂದ್ರಧನುಷ್ ಲಸಿಕೆ ಹಾಕಲು 710 ಗರ್ಭಿಣಿ ಫಲಾನುಭವಿಗಳನ್ನು ಮತ್ತು 2 ವರ್ಷದ ವರೆಗಿನ 3154 ಮಕ್ಕಳು ಮತ್ತು 2 ರಿಂದ 5 ವರ್ಷದ 170 ಮಕ್ಕಳನ್ನು ಗುರುತಿಸಲಾಗಿದೆ. ಆಗಸ್ಟ್ 12 ರ ವರೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುತ್ತದೆ. ಯಾರು ಲಸಿಕೆಗಳಿಂದ ಹೊರಗಿದ್ದಾರೆ, ಅವರು ಕಡ್ಡಾಯವಾಗಿ ಇಂದ್ರಧನುಷ್ ಲಸಿಕೆ ಹಾಕಿಸಿಕೊಳ್ಳಬೇಕೆಂದು ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿ ಡಾ; ಮೀನಾಕ್ಷಿಯವರು ಇದೇ ಸಂದರ್ಭದಲ್ಲಿ ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರಾದ ವಾಸಂತಿ ಉಪ್ಪಾರ್, ಕುಟುಂಬ ಕಲ್ಯಾಣಾಧಿಕಾರಿ ಡಾ; ರೇಣುಕರಾಧ್ಯ ಹಾಗೂ ಕಾರ್ಯಕ್ರಮ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
=====
—
ReplyForward |