ಮೀಟೂ ಶೃತಿ ಹರಿಹರನ್‌ಗೆ ನೋಟೀಸ್

ಬೆಂಗಳೂರು,ನ.೨೮-ಸ್ಯಾಂಡಲ್‌ವುಡ್ ನಟಿ ಶೃತಿ ಹರಿಹರನ್ ಅವರಿಗೆ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.
ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿ ೨೦೧೮ರಲ್ಲಿ ನಟಿ ಶೃತಿಹರಿಹರನ್ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಶೃತಿ ಹರಿಹರನ್ ದೂರಿನ್ವಯ ಅರ್ಜುನ್ ಸರ್ಜಾ ವಿರುದ್ಧ ೩೫೪, ೩೫೪ ಮತ್ತು ೫೦೬ ಐಪಿಸಿ ಅಡಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು.
ಮೂರು ವರ್ಷಗಳ ಬಳಿ ಮತ್ತೆ ಮೀಟೂ ಪ್ರಕರಣ ಕುರಿತಂತೆ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಶೃತಿ ಹರಿಹರನ್‌ಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.
ಕಳೆದ ೨೦೧೫ರ ನವೆಂಬರ್‌ನಲ್ಲಿ ಹೆಬ್ಬಾಳ ಹಾಗೂ ದೇವನಹಳ್ಳಿಯಲ್ಲಿ ವಿಸ್ಮಯ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಅರ್ಜುನ್ ಸರ್ಜಾ ಅವರು ಲೈಂಗಿಕ ಕಿರುಕುಳ ನೀಡಿದ್ದರು ಎಂದು ಶೃತಿ ಹರಿಹರನ್ ಆರೋಪಿಸಿದ್ದರು.
ಈ ಘಟನೆ ನಡೆದ ಎರಡು ವರ್ಷಗಳ ನಂತರ ಶೃತಿ ಹರಿಹರನ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು.