ಮೀಸಲಾತಿ ಅನುಷ್ಠಾನಕ್ಕೆ ಒತ್ತಾಯ

ಕಲಬುರಗಿ,ಮಾ.30-ಆರ್ಥಿಕವಾಗಿ ಹಿಂದುಳಿದ ವರ್ಗಗಳ (ಇಡಬ್ಲ್ಯೂಎಸ್) ಮೀಸಲಾತಿ ಅನುಷ್ಠಾನಕ್ಕೆ ತರಲು ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಬ್ರಾಹ್ಮಿನ್ ಆರ್ಗನೈಸೇಶನ್ ಆಫ್ ಇಂಡಿಯಾ ಯುವ ಘಟಕ ರಾಜ್ಯಪಾಲರನ್ನು ಒತ್ತಾಯಿಸಿದೆ.
ಈ ಸಂಬಂಧ ಬ್ರಾಹ್ಮಿನ್ ಆರ್ಗನೈಸೇಶನ್ ಆಫ್ ಇಂಡಿಯಾ ಯುವ ಘಟಕದ ಜಿಲ್ಲಾಧ್ಯಕ್ಷ ಗುರುರಾಜ ಕುಲಕರ್ಣಿ (ನಿಂಬರ್ಗಿ) ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಿ ಈ ಒತ್ತಾಯ ಮಾಡಲಾಗಿದೆ.
ದೇಶದಾದ್ಯಂತ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ (ಇಡಬ್ಲ್ಯೂಎಸ್) ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ 10% ಮೀಸಲಾತಿ ನೀಡಿ ಆದೇಶಿಸಿದೆ, ಕೇಂದ್ರ ಸರ್ಕಾರದ 10% ಇಡಬ್ಲ್ಯೂಎಸ್ ಮೀಸಲಾತಿ ಆದೇಶವನ್ನು ದೇಶದ 16 ರಾಜ್ಯಕ್ಕಿಂತ ಹೆಚ್ಚು ರಾಜ್ಯ ಸರ್ಕಾರಗಳು ಅನುಷ್ಠಾನಕ್ಕೆ ತಂದಿವೆ. ಆದರೆ, ಕರ್ನಾಟಕ ಸರಕಾರ ಮಾತ್ರ ಮೀಸಲಾತಿ ವಿಷಯ ಮತ್ತು ಕೇಂದ್ರ ಸರ್ಕಾರದ ಆದೇಶವನ್ನು ಜಾರಿಗೆ ತರಲು ವಿಳಂಬ ಮಾಡುತ್ತಿದೆ. ಇದರಿಂದ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳು ಸರಕಾರದ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ಮೀಸಲಾತಿಯನ್ನು ಜಾರಿಗೆ ತರಲು ಸೂಕ್ತ ನಿರ್ದೇಶನ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.
ಇದೇ ಸಂಧರ್ಭದಲ್ಲಿ ಬಿ ಓ ಐ ಯುವ ಘಟಕದ ಸದಸ್ಯರಾದ ಪ್ರಸನ್ನ ದೇಶಪಾಂಡೆ ಹಾಜರಿದ್ದರು.