ಮೀಸಲಾತಿ ರದ್ದತಿ ಸರಿಯಲ್ಲ: ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು, ನ.20: ಸ್ಥಳೀಯ ಸಂಸ್ಥೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಮೀಸಲಾತಿ ರದ್ದುಪಡಿಸಿರುವುದು ಸರಿಯಲ್ಲ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಆಧಾರದಲ್ಲಿ ಹೈಕೋರ್ಟ್ ಈ ತೀರ್ಮಾನ ತೆಗೆದುಕೊಂಡಿದೆ ಎಂಬುದು ನನಗೆ ಗೊತ್ತಿಲ್ಲ. ಆದರೆ, ಮೀಸಲಾತಿ ರದ್ದುಪಡಿಸಿರುವುದರಿಂದ ಅನವಶ್ಯಕ ರಾಜಕೀಯ ಚಟುವಟಿಕೆಗಳು ನಡೆಯುತ್ತವೆ ಎಂದು ತಿಳಿಸಿದರು.
ಆದೇಶಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸಲು 10 ದಿನ ಕಾಲಾವಕಾಶವಿದೆ. ನಾವು ಮೇಲ್ಮನವಿ ಸಲ್ಲಿಸುತ್ತೇವೆ ಎಂದರು.