ಮೀಸಲಾತಿ ವಿಚಾರಣೆ ಅಂತ್ಯಗೊಳ್ಳುವ ತನಕ ಯಾವುದೇ ನಿರ್ಧಾರವಿಲ್ಲ: ಬೊಮ್ಮಾಯಿ

ಧಾರವಾಡ, ಏ.25- ಮುಸ್ಲಿಮರ ಮೀಸಲಾತಿಗೆ ಸಂಬಂಧಿಸಿ ಸರ್ವೋಚ್ಛ ನ್ಯಾಯಾಲಯದಲ್ಲಿ ವಿಚಾರಣೆ ಅಂತ್ಯಗೊಳ್ಳುವ ತನಕ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ನ್ಯಾಯಾಲಯಕ್ಕೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಧಾರವಾಡ ತಾಲ್ಲೂಕಿನ ಉಪ್ಪಿನ ಬೆಟಗೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಪರ ಇಂದು ಪ್ರಚಾರ ನಡೆಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ವಿಚಾರಣೆಯನ್ನು ಮೇ 9ಕ್ಜೆ ಮುಂದೂಡಿದೆ ಆದರೆ ತಡೆಯಾಜ್ಞೆ ಸಿಕ್ಕಿಲ್ಲ ಎಂದರು.
ಮುಸ್ಲಿಂ ಸಮುದಾಯದ ವಿರುದ್ಧವಾಗಿ ಮೀಸಲಾತಿ ಹಂಚಿಕೆ ಆಗಿಲ್ಲ ಎಂಬುದಾಗಿ ಕಾಂಗ್ರೆಸ್ ಸುಳ್ಳು ಹೇಳುತ್ತಿದೆ ಎಂದು ತಿರುಗೇಟು ನೀಡಿದರು.
ಮುಸ್ಲಿಮರಲ್ಲಿ ಏಳು ಉಪಜಾತಿಗಳಿವೆ. ಅಲ್ಲೂ ಕೂಡ ಕಡಿಮೆ ಆದಾಯಕ್ಕೆ ಮೀಸಲಾತಿ ಸಿಗುತ್ತಿತ್ತು. ಸರ್ಕಾರ ಕೈಗೊಂಡಿರುವ ಮೀಸಲಾತಿಯಲ್ಲೂ ಅದೇ ಸಿಗುತ್ತದೆ. ಹೀಗಾಗಿ ಅನ್ಯಾಯವಾಗಿಲ್ಲ. ಮಾನದಂಡಗಳೂ ಬದಲಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.