ಮೀಸಲಾತಿ ಹೆಚ್ಚಳ ಸ್ವಾಭಿಮಾನದ ಬದುಕಿಗೆ ಸಹಕಾರಿ: ಸಿಎಂ

ಬೆಂಗಳೂರ ನ..20- ಪರಿಶಿಷ್ಠ ಜಾತಿಗೆ ಶೇ.15 ರಿಂದ 17 ಹಾಗೂ ಪರಿಶಿಷ್ಠ ಪಂಗಡಕ್ಕೆ ಶೇ. 3 ರಿಂದ 7 ಮೀಸಲಾತಿ ಹೆಚ್ಚಳ ಸಂವಿಧಾನಬದ್ಧವಾದ ನಿರ್ಧಾರವಾಗಿದ್ದು, ತಳಸಮುದಾಯದವರಿಗೆ ಸ್ವಾಭಿಮಾನದ ಬದುಕಿಗೆ ಮೀಸಲಾತಿ ಹೆಚ್ಚಳ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ಧಾರೆ.

ಪ್ರಧಾನಿ ನರೇಂದ್ರ ಮೋದಿ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದೇವೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್ ಎನ್ನುವ ಮೂಲಕ ಇಡೀ ಭಾರತವನ್ನು ಒಗ್ಗೂಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಬಿಜೆಪಿ ಪಕ್ಷದ ಎಸ್ ಟಿ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶ”ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಏಕ್ ಭಾರತ ,ಶ್ರೇಷ್ಠ ಭಾರತ ಎಂದು ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸಿದ್ದಾರೆ. ತಳಸಮುದಾಯದವರಿಗೆ ಸ್ವಾಭಿಮಾನದ ಬದುಕನ್ನು ನೀಡಲು ಸರ್ಕಾರ, ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಳದ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ ಎಂದರು.

ಸರ್ಕಾರ ಎಸ್ ಸಿ ಎಸ್ ಟಿ ಸಮುದಾಯಗಳಿಗೆ 28 ಸಾವಿರಕ್ಕೂ ಹೆಚ್ಚಿನ ಅನುದಾನವನ್ನು ನೀಡಿದೆ. ಸಮಾಜ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳಿಗೆ 6 ಸಾವಿರ ಕೋಟಿ ರೂ. ನೀಡಲಾಗಿದೆ. ಎಸ್ ಟಿ ಸಮುದಾಯಕ್ಕೆ ಪ್ರತ್ಯೇಕ ನಿರ್ದೇಶನಾಲಯವನ್ನು ಸ್ಥಾಪಿಸಲಾಯಿತು. ಹಾಲು ಮತದ ಸಮುದಾಯಕ್ಕೆ ನ್ಯಾಯ ಒದಗಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ£ ಕಾಗಿನೆಲೆ ಅಭಿವೃದ್ಧಿ ಅನುದಾನ ನೀಡಿದ್ದರು ಎಂದು ತಿಳಿಸಿದ್ದಾರೆ.

ಎಸ್ ಸಿ ಎಸ್ ಟಿ ಸಮುದಾಯದವರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕೆಂಬ ಆಶಯದೊಂದಿದೆ ನಮ್ಮ ಸರ್ಕಾರ ಯೋಜನೆಗಳನ್ನು ಜಾರಿಗೊಳಿಸಿದೆ. 100 ಅಂಬೇಡ್ಕರ್ ಹಾಸ್ಟೆಲ್ ಗಳು, 50 ಕನಕದಾಸ ಹಾಸ್ಟೆಲ್ ಗಳನ್ನು ನಿರ್ಮಿಸಲಾಗುತ್ತಿದೆ. ಐದು ಲಕ್ಷ ಮಹಿಳೆಯರಿಗೆ ಸ್ತ್ರೀ ಸಾಮಥ್ರ್ಯ ಯೋಜನೆ ಹಾಗೂ ಐದು ಲಕ್ಷ ಯುವಕರಿಗೆ ವಿವೇಕಾನಂದ ಯುವಶಕ್ತಿ ಯೋಜನೆಗಳ ಮೂಲಕ ಸ್ವಯಂ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದರು.

ವಾಲ್ಮೀಕಿ ನಮ್ಮ ಸರ್ಕಾರಕ್ಕೆ ಸ್ಪೂರ್ತಿ:

ವಾಲ್ಮೀಕಿ ರಚಿಸಿದ ರಾಮಾಯಣ, ಪವಿತ್ರ ಧರ್ಮಗ್ರಂಥಗಳಲ್ಲಿ ಒಂದು. ವಾಲ್ಮೀಕಿಯವರು ನಮಗೆ ಸ್ಪೂರ್ತಿ. ದೇಶವನ್ನು ಕಟ್ಟುವ ಕೆಲಸವನ್ನು ವಾಲ್ಮೀಕಿ ಸಮುದಾಯದವರು ಮಾಡಬೇಕು. ಮೊಘಲರನ್ನು ಹಿಮ್ಮೆಟ್ಟಿಸಿದ್ದು, ಈ ಸಮುದಾಯದ ವೀರ ನಾಯಕರು. ವೀರ ಮದಕರಿ, ಏಕಲವ್ಯ,ಬೇಡರ ಕಣ್ಣಪ್ಪ ಎಲ್ಲರೂ ವಾಲ್ಮೀಕಿ ಕುಲವನ್ನು ಶ್ರೇಷ್ಟಗೊಳಿಸಿದ್ದಾರೆ ಎಂದರು.