
ಕೋಲಾರ,ಆ.೨- ತಡವಾದ ಮುಂಗಾರು ಈಗಾಗಲೇ ಆರಂಭವಾಗಿದ್ದು, ಮುಂಗಾರು ಮಳೆಯಿಂದ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪ ಪರಿಸ್ಥಿತಿಗಳನ್ನು ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ೬ ಮುಂಜಾಗ್ರತಾ ಕ್ರಮಗಳೊಂದಿಗೆ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸನ್ನದ್ದರಾಗಿರುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ನಗರ ಹೊರವಲಯದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವರು ಮಾತನಾಡಿ, ಅಧಿಕಾರಿಗಳು ಮಳೆ, ಪ್ರವಾಹ ಸಂದರ್ಭದಲ್ಲಿ ಏನೇ ತೊಂದರೆಯಾದಲ್ಲಿ ಕೂಡಲೇ ಘಟನಾ ಸ್ಥಳಕ್ಕೆ ಹೋಗಬೇಕು. ಜೀವ ಮತ್ತು ಆಸ್ತಿ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು. ಅಗ್ನಿ ಶಾಮಕದಳ ತುರ್ತು ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸಲು ಅಗತ್ಯ ಸುರಕ್ಷತಾ ಉಪಕರಣಗಳೊಂದಿಗೆ ಸನ್ನದ್ದರಾಗಿರುವಂತೆ ಮತ್ತು ಗೃಹ ರಕ್ಷಕದಳ ಸಿಬ್ಬಂದಿಗಳು ಸಹಾ ತುರ್ತು ಸೇವೆಗೆ ಲಭ್ಯವಿರುವಂತೆ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯುತ್ ತಂತಿಗಳು ಜೋತು ಬಿದ್ದಿರುವುದು ಕಂಡು ಬಂದಲ್ಲಿ ಕೂಡಲೇ ಸರಿಪಡಿಸಿ ವಿದ್ಯುತ್ ತಂತಿಯಿಂದ ಯಾವುದೇ ಜೀವಹಾನಿಯಾಗದಂತೆ ಎಚ್ಚರ ವಹಿಸಬೇಕು ಎಂದರು
ಜಿಲ್ಲೆಯಲ್ಲಿ ಎಲ್ಲಾ ತಾಲ್ಲೂಕಿನ ಟಾಸ್ಕ್ ಪೋರ್ಸ್ ಕಮಿಟಿಯನ್ನು ಮಾಡಿ ಸಾರ್ವಜನಿಕರಿಗೆ ತುರ್ತು ಸ್ಪಂದನೆಗೆ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಮ್ ಗಳಂತೆ ತಾಲ್ಲೂಕುಗಳಲ್ಲಿ ಸಹ ಕಂಟ್ರೋಲ್ ರೂಂ ಸ್ಥಾಪಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ ಅವರು ಸಾರ್ವಜನಿಕರು ಮಳೆ ಹಾನಿ ಬಗ್ಗೆ ಜಿಲ್ಲಾ ಕೇಂದ್ರದಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಮ್ ಸಂಖ್ಯೆ ೧೦೭೭ ಅಥವಾ ೦೮೧೫೨ ೨೪೩೫೦೬ ನ್ನು ಸಂಪರ್ಕಿಸಿ ಹಾನಿಯ ಬಗ್ಗೆ ವಿವರಗಳನ್ನು ವಿನಿಮಯ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ|| ಶಂಕರ್ ವಣಿಕ್ಯಾಳ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು