ಮುಂಡಗೋಡ ಪ.ಪಂ. ಬಿಜೆಪಿ ಮಡಿಲಿಗೆ

??????

ಮುಂಡಗೋಡ,ನ4 : ಮುಂಡಗೋಡ ಪಟ್ಟಣ ಪಂಚಾಯತ ಅಧ್ಯಕ್ಷರಾಗಿ ಬಿಜೆಪಿಯ ರೇಣುಕಾ ಹಾವೇರಿ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿಯ ಮಂಜುನಾಥ ಹರ್ಮಲಕರ ಅವರು ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.
ತಹಶೀಲದಾರ ಶ್ರೀಧರ ಮುಂದಲಮನಿ ಅವರು ಆಯ್ಕೆ ಪ್ರಕ್ರಿಯೆ ನಡೆಸಿದರು. ಪ.ಪಂ. ಮುಖ್ಯಾಧಿಕಾರಿ ಸಂಗನಬಸಯ್ಯ ಹಾಜರಿದ್ದರು.
ಮುಂಡಗೋಡ ಪಟ್ಟಣ ಪಂಚಾಯತ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ(ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾತಿ ನಿಗದಿಪಡಿಸಲಾಗಿತ್ತು. ಒಟ್ಟು 19 ಸದಸ್ಯರ ಬಲ ಹೊಂದಿರುವ ಮುಂಡಗೋಡ ಪ.ಪಂ.ಯಲ್ಲಿ ಬಿ.ಜೆ.ಪಿ. 10 ಹಾಗೂ ಕಾಂಗ್ರೆಸ 9 ಅಭ್ಯರ್ಥಿಗಳು ಚುನಾವಣೆಯಲ್ಲಿ ಆಯ್ಕೆಯಾಗಿದ್ದರು. ಕಳೆದ 2-3 ದಿನಗಳ ಹಿಂದೆ ಪ.ಪಂ.ಯ 5 ಜನ ಕಾಂಗ್ರೆಸ ಸದಸ್ಯರು ಬಿಜೆಪಿ ಸೇರಿದ್ದರು.
ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಹಕರಿಸಿದ ತಾಲೂಕಿನ ಎಲ್ಲಾ ಮುಖಂಡರಿಗೆ ಪಕ್ಷದ ಪದಾಧಿಕಾರಿಗಳಿಗೆ, ಕಾರ್ಯಕರ್ತರಿಗೆ ಸಚಿವ ಶಿವರಾಮ ಹೆಬ್ಬಾರ ಅವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ವಿ.ಎಸ್.ಪಾಟೀಲ, ಪ್ರಮುಖರಾದ ವಿವೇಕ ಹೆಬ್ಬಾರ, ಗುಡ್ಡಪ್ಪಾ ಕಾತೂರ, ಉಮೇಶ ಬಿಜಾಪುರ, ಪಕ್ಷದ ಪದಾಧಿಕಾರಿಗಳು, ಮುಖಂಡರು ಇದ್ದರು.