ಮುಂದಿನವಾರ ಕೆಟಿಎಂ

ದೀಕ್ಷಿತ್ ಶೆಟ್ಟಿ ಹಾಗೂ ಸಂಜನಾ , ಕಾಜಲ್ ಕುಂದರ್ ಜೋಡಿಯ ಚಿತ್ರ ಕೆಟಿಎಂ ಮುಂದಿನವಾರ ರಾಜ್ಯಾದ್ಯಂತ ತೆರೆಗೆ ಬರಲು ರೆಡಿಯಾಗಿದೆ.

“ಕೆಟಿಎಂ’ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು ಟೀಸರ್ ಮೂಲಕ ಒಂದಷ್ಟು ಸಿನಿಪ್ರಿಯರ ಗಮನ ಸೆಳೆದಿದೆ. ಚಿತ್ರತಂಡ ಹಾಡುಗಳ ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ನೀಡುತ್ತಿದೆ. ಕೆಟಿಎಂ ಸಿನಿಮಾದ ಹಾಡುಗಳು ಕೇಳುಗರನ್ನು ಮೋಡಿ ಮಾಡುತ್ತಿವೆ. ಈ ಹಿಂದೆ ಬಿಡುಗಡೆಯಾಗಿದ್ದ  ಎರಡು ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದೀಗ ಕೆಟಿಎಂ ಸಿನಿಮಾದ ಮೂರನೇ ಹಾಡು ಅನಾವರಣಗೊಂಡಿದೆ.

ಎಲ್ಲಾ ನೀನೇನೆ ಎಂಬ ಮೆಲೋಡಿ ಹಾಡಿಗೆ ಧನಂಜಯ್ ರಂಜನ್ ಸಾಹಿತ್ಯ ಬರೆದಿದ್ದು,  ಚೇತನ್ ರಾವ್ ಸಂಚಿತ್ ಹೆಗ್ಡೆ ಜೊತೆಗೂಡಿ ಧ್ವನಿಯಾಗುವುದರ ಜೊತೆಗೆ ಸಂಗೀತ ಒದಗಿಸಿದ್ದಾರೆ. ಎಲ್ಲಾ ನೀನೇನೆ ಎನ್ನುತ್ತಾ ದೀಕ್ಷಿತ್ ಸಂಜನಾ ದಾಸ್ ಗೆ ಕ್ಲೀನ್ ಬೋಲ್ಡ್ ಆಗಿದ್ದಾರೆ.

“ಅಥರ್ವ’ ಚಿತ್ರ ನಿರ್ದೇಶಿಸಿದ್ದ ಅರುಣ್ “ಕೆಟಿಎಂ’ ಸಿನಿಮಾಕ್ಕೆ ಆಕ್ಷನ್-ಕಟ್ ಹೇಳಿದ್ದಾರೆ. ವಿನಯ್  ಸಿನಿಮಾ ನಿರ್ಮಾಣ ಮಾಡಿದ್ದಾರೆ. ನವಿರಾದ ಪ್ರೇಮಕಹಾನಿಯ “ಕೆಟಿಎಂ’ ಸಿನಿಮಾದಲ್ಲಿ ದೀಕ್ಷಿತ್ ಶೆಟ್ಟಿ ನಾಲ್ಕು ವಿಭಿನ್ನ ಶೇಡ್‍ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.ಕಾಜಲ್ ಕುಂದರ್ ಹಾಗೂ ಸಂಜನಾ ನಾಯಕಿಯರಾಗಿದ್ದಾರೆ.

ಉಳಿದಂತೆ ಉಷಾ ಭಂಡಾರಿ, ಪ್ರಕಾಶ್ ತುಮ್ಮಿನಾಡು, ಬಿಗ್ ಬಾಸ್ ಖ್ಯಾತಿಯ ತುಕಾಲಿ ಸಂತು, ರಘು ರಾಮನಕೊಪ್ಪ, ಶಾನಿಲ್ ಗುರು, ಬಾಬು ಹಿರಣಯ್ಯ, ದೇವ್ ದೇವಯ್ಯ, ಅಭಿಷೇಕ್ ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ನವೀನ್ ಛಾಯಾಗ್ರಹಣವಿದೆ. ಉಡುಪಿ, ಮಂಗಳೂರು, ಕಾರ್ಕಳ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.