ಮುಂದಿನ ತಿಂಗಳು ಕಲಬುರಗಿಯಲ್ಲಿ ಪ್ರವಾಸೋದ್ಯಮ ಉತ್ತೇಜಿಸಲು ಒಂದು ದಿನದ ಸ್ಪರ್ಧೆ ಮತ್ತು ಕಾರ್ಯಕ್ರಮ : ಜಿಲ್ಲಾಧಿಕಾರಿ ತರನ್ನುಮ್

ಕಲಬುರಗಿ:ಜ.30: ಕರ್ನಾಟಕ ರಾಜ್ಯ ಸರ್ಕಾರ ಮತ್ತು ಪ್ರವಾಸೋದ್ಯಮ ಇಲಾಖೆಯು ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ಕಲಬುರಗಿ ಜಿಲ್ಲೆಯ ವಿವಿಧ ಪಾರಂಪರಿಕ ಪ್ರವಾಸಿ ತಾಣಗಳು, ಸ್ಮಾರಕಗಳು, ಧಾರ್ಮಿಕ ಸ್ಥಳಗಳನ್ನು ಎತ್ತಿ ಹಿಡಿಯಲು ಫೆಬ್ರವರಿ ತಿಂಗಳಲ್ಲಿ ಒಂದು ದಿನದ ವಿಚಾರ ಸಂಕಿರಣಗಳು, ಸ್ಪರ್ಧೆಗಳು ಮತ್ತು ಇತರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ತಿಳಿಸಿದರು.

ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ಮಂಗಳವಾರದಂದು, ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯ ಮತ್ತು ಯುವ ಟೂರಿಸಂ ಕ್ಲಬ್ ಸಹಯೋಗದಲ್ಲಿ ವಿವಿಯ ಪ್ರವಾಸ ಮತ್ತು ಪ್ರವಾಸೋದ್ಯಮ ವಿಭಾಗದ ವತಿಯಿಂದ ಆಯೋಜಿಸಿದ್ದ ಎರಡು ದಿನಗಳ “ಪರ್ಯಟನ್ 2ಏ24” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಲಬುರಗಿಯಲ್ಲಿ ಹೆಚ್ಚಿನ ಪ್ರವಾಸೋದ್ಯಮ ಸಾಮಥ್ರ್ಯವು ಇಲ್ಲಿಯವರೆಗೆ ಬಳಕೆಯಾಗದೆ ಉಳಿದಿದೆ ಮತ್ತು ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮ ಸಾಮಥ್ರ್ಯವನ್ನು ಹೊರ ಜಗತ್ತಿಗೆ ಉತ್ತೇಜಿಸಲು ಸಂಪೂರ್ಣ ಪ್ರಯತ್ನದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಯುವಕರಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಎರಡು ದಿನಗಳ ಉತ್ಸವದಲ್ಲಿ ವಿಭಿನ್ನ ಸಾಂಸ್ಕøತಿಕ, ಸಾಂಪ್ರದಾಯಿಕ ಕ್ರೀಡೆ ಮತ್ತು ಇತರ ಕಾರ್ಯಕ್ರಮಗಳನ್ನು ಒಂದೇ ಸೂರಿನಡಿ ವಿಶಿಷ್ಟವಾದ “ಪರ್ಯಟನ್ 2ಏ24” ಐತಿಹಾಸಿಕ ಕಲಬುರಗಿ ಜಿಲ್ಲೆಯ ವಿವಿಧ ಸಂಸ್ಕೃತಿಗಳು ಮತ್ತು ಶ್ರೀಮಂತ ಪರಂಪರೆಯ ಬಗ್ಗೆ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ಶರಣಬಸವ ವಿಶ್ವವಿದ್ಯಾಲಯವನ್ನು ಶ್ಲಾಘಿಸಿದರು. ಇದು ಶರಣಬಸವ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಇತರ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಸಹ ಅವಕಾಶ ನೀಡಿರುವುದು ಸಂತಸ ತಂದಿದೆ ಎಂದರು.

ಕಲಬುರಗಿ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಹೇಗೆ ಉತ್ತೇಜಿಸುವುದು ಎಂಬುದರ ಕುರಿತು ಭಾಗವಹಿಸುವ ವಿವಿಧ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಸೇರಿದಂತೆ ಶರಣಬಸವ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಸಲಹೆಗಳನ್ನು ವಿಶ್ವವಿದ್ಯಾಲಯವು ಸ್ವಾಗತಿಸಬೇಕು ಎಂದು ಶ್ರೀಮತಿ ತರನುಮ್ ಹೇಳಿದರು. “ಯುವ ವಿದ್ಯಾರ್ಥಿಗಳು ಹೊಸ ಆಲೋಚನೆಗಳನ್ನು ಹೊಂದಿರುವ ಯುವ ಮನಸ್ಸುಗಳು, ಈ ಪ್ರದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಹೊರ ಜಗತ್ತಿಗೆ ಪ್ರಚಾರ ಮಾಡಲು ಪ್ರಕಾಶಮಾನವಾದ ಆಲೋಚನೆಗಳನ್ನು ಹೊಂದಿವೆ ಮತ್ತು ಇದನ್ನು ಪ್ರವಾಸೋದ್ಯಮ ನೀತಿಗಳಲ್ಲಿ ಜೋಡಿಸಿ ಅಳವಡಿಸಬೇಕು” ಎಂದು ತಿಳಿಸಿದರು.

ಇಂತಹ ಸ್ಪರ್ಧಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಈ ಭಾಗದ ವಿದ್ಯಾರ್ಥಿಗಳಲ್ಲಿ ಭಯ, ಕೀಳರಿಮೆ ಹೋಗಲಾಡಿಸಲು ಸಹಕಾರಿಯಾಗುತ್ತದೆ ಎಂದ ಅವರು, ಕರ್ನಾಟಕದ ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಪ್ರತಿಭೆಗಳು ಲಭ್ಯವಿದ್ದು, ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸಿ ಆತ್ಮವಿಶ್ವಾಸದಿಂದ ಉತ್ತಮ ಸಾಧನೆಗೈಯ್ಯಬಹುದು ಎಂದು ತಿಳಿಸಿದರು.

ಕಲಬುರಗಿ ಪ್ರದೇಶವು ತನ್ನದೇ ಆದ ಇತಿಹಾಸ ಮತ್ತು ವಿಶಿಷ್ಟ ಸಂಸ್ಕೃತಿಯಿಂದ ಸಮೃದ್ಧವಾಗಿದೆ ಮತ್ತು ಈ ಪ್ರದೇಶದ ಪ್ರವಾಸೋದ್ಯಮ ಸಾಮಥ್ರ್ಯವನ್ನು ಉತ್ತೇಜಿಸುವ ಪ್ರಬಲ ಅಂಶಗಳಲ್ಲಿ ಒಂದಾಗಿ ಬಳಸಬೇಕಾಗಿದೆ. ಕರ್ನಾಟಕಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಹಾಗೂ ವಿದೇಶಿಯರಿಗೆ ಕಲಬುರಗಿಯನ್ನು ಪ್ರಮುಖ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ತುರ್ತು ಅಗತ್ಯವಿದೆ ಎಂದು ಶ್ರೀಮತಿ ತರನ್ನುಮ್ ಹೇಳಿದರು.

ಕಾರ್ಯಕ್ರಮದ ಪ್ರಾಯೋಜಕರಲ್ಲಿ ಒಬ್ಬರಾದ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಅಲೋಕ್ ಪಾಟೀಲ್ ರೇವೂರ ಮಾತನಾಡಿ, ಈ ಪ್ರದೇಶದಲ್ಲಿ ವೈದ್ಯಕೀಯ ಪ್ರವಾಸೋದ್ಯಮವನ್ನು ಉತ್ತೇಜಿಸಬೇಕು ಮತ್ತು ಕಲಬುರಗಿ ಪ್ರದೇಶವು ಎಲ್ಲಾ ವಿಭಾಗಗಳಲ್ಲಿ ಅತ್ಯುತ್ತಮ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆ ಎಂದು ತಿಳಿಸಿದ ಅವರು, ಮೆಟ್ರೋಪಾಲಿಟನ್ ನಗರಗಳ ಆಸ್ಪತ್ರೆಗಳಲ್ಲಿ ವಿಧಿಸಲಾಗುವ ಚಿಕಿತ್ಸಾ ವೆಚ್ಚಕ್ಕೆ ಹೋಲಿಸಿದರೆ ಈ ಪ್ರದೇಶದ ಆಸ್ಪತ್ರೆಗಳಲ್ಲಿನ ವಿವಿಧ ಕಾಯಿಲೆಗಳಿಗೆ ವೈದ್ಯಕೀಯ ಸೌಲಭ್ಯಗಳು ಮತ್ತು ಚಿಕಿತ್ಸಾ ಮಾರ್ಗಗಳು ಅತ್ಯಂತ ಕಡಿಮೆ ವೆಚ್ಚದಲ್ಲಿ ನಿರ್ವಹಿಸಲ್ಪಡುತ್ತಿವೆ ಎಂದು ತಿಳಿಸಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಅಧ್ಯಕ್ಷತೆ ವಹಿಸಿ ಮಾತನಾಡಿ, ವೈವಿಧ್ಯಮಯ ಸಂಸ್ಕೃತಿಗಳಿಗೆ ಹೆಸರುವಾಸಿಯಾಗಿರುವ ಕಲಬುರಗಿ ಪ್ರದೇಶವನ್ನು ಶ್ರೀಮಂತವಾದ ಐತಿಹಾಸಿಕ ಸ್ಮಾರಕಗಳು ಹಾಗೂ ಧಾರ್ಮಿಕ ಕೇಂದ್ರಗಳನ್ನು ಹೊಂದಿರುವ ಪ್ರಮುಖ ಪ್ರವಾಸಿ ತಾಣವನ್ನಾಗಿ ರೂಪಿಸುವ ತುರ್ತು ಅಗತ್ಯವಿದೆ. ಎರಡು ದಶಕಗಳ ಹಿಂದೆ ಸ್ಥಾಪಿತವಾದ ಪ್ರಯಾಣ ಮತ್ತು ಪ್ರವಾಸೋದ್ಯಮ ವಿಭಾಗದಲ್ಲಿ, ಇಲ್ಲಿಯವರೆಗೆ ದಾಖಲಾದ ವಿದ್ಯಾರ್ಥಿಗಳಿಗೆ ಶೇಕಡಾವಾರು ಉದ್ಯೋಗಾವಕಾಶಗಳನ್ನು ಲಭಿಸಿದ್ದು ದಾಖಲೆಯನ್ನು ಹೊಂದಿದೆ ಎಂದು ಅವರು ಹೇಳಿದರು.

ಈ ಸಂಧರ್ಭದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಸಮಕುಲಪತಿ ಪೆÇ್ರ.ವಿ.ಡಿ.ಮೈತ್ರಿ, ಕುಲಸಚಿವ ಡಾ. ಅನಿಲಕುಮಾರ ಬಿಡವೆ, ಡೀನ್ ಡಾ. ಲಕ್ಷ್ಮೀ ಪಾಟೀಲ್ ಮಾಕಾ, ಭಾμÁ ನಿಕಾಯದ ಮುಖ್ಯಸ್ಥರಾದ ಡಾ. ಎಸ್.ಜಿ.ಡೊಳ್ಳೇಗೌಡರ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು. ಪ್ರವಾಸ ಮತ್ತು ಪ್ರವಾಸೋದ್ಯಮ ಇಲಾಖೆಯ ಚೇರಪರ್ಸನ್ ಡಾ. ವಾಣಿಶ್ರೀ ಸಿ ಟಿ ಸ್ವಾಗತಿಸಿದರು, ಪೆÇ್ರ. ಎಸ್.ಟಿ.ಮಂಜುನಾಥ್ ವಂದಿಸಿದರು. 20ಕ್ಕೂ ಹೆಚ್ಚು ಕಾಲೇಜುಗಳ ವಿದ್ಯಾರ್ಥಿಗಳು “ಪರ್ಯಟನ್ 2K24” ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.