ಮುಂದಿನ ದಿನಗಳಲ್ಲಿ ಉಗ್ರ ಹೋರಾಟ: ಕೋನರೆಡ್ಡಿ

ಹುಬ್ಬಳ್ಳಿ,ಮಾ26: ಭಾರತ ಬಂದ್ ಇದು ಕೇವಲ ಸಾಂಕೇತಿಕ ಪ್ರತಿಭಟನೆಯಷ್ಟೆ. ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಸರಕಾರಕ್ಕೆ ಎಚ್ಚರಿಕೆ ನೀಡಿದರು.
ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಖಂಡಿಸಿ ರೈತ ಸಂಘಟನೆಗಳು ಭಾರತ ಬಂದ್‍ಗೆ ಬೆಂಬಲಿಸಿ ನಗರದ ಚೆನ್ನಮ್ಮ ವೃತ್ತದಲ್ಲಿಂದು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ರೈತ ವಿರೋಧಿ ನೀತಿ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ರೈತರ ಅವನತಿ ಮಾಡಲು ಹೋರಟಿದೆ. ಯಾವುದೇ ಕಾಯ್ದೆಯನ್ನು ಜಾರಿಗೆ ತರಬೇಕಾದರೆ ಸಾರ್ವಜನಿಕರಿಗೆ ಅನಕೂಲವಾಗುವ ರೀತಿ ಇರಬೇಕು. ಆದ್ದರಿಂದ ಕೇಂದ್ರ ಸರಕಾರ ತನ್ನ ನಿಲುವು ಬದಲಿಸಿ ಕೂಡಲೇ ಎಲ್ಲ ರೈತ ಕೃಷಿ ವಿರೋಧಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಕಾಯ್ದೆ ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.