ಮುಂಬರುವ ಅತಿವೃಷ್ಟಿ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸರ್ವರೀತಿಯಿಂದಲೂ ಸನ್ನದ್ಧಗೊಳ್ಳಲು ಸೂಚನೆ

ವಿಜಯಪುರ ಜೂ.8-ಅತಿವೃಷ್ಟಿ-ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಸರ್ವ ರೀತಿಯಿಂದಲೂ ಸನ್ನದ್ಧಗೊಳ್ಳುವಂತೆ ಹಾಗೂ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಪಿ, ಸುನಿಲ್ ಕುಮಾರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಪ್ರಸಕ್ತ ಸಾಲಿನ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸುವ ಕುರಿತಂತೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು ಮುಂದಿನ ದಿನಗಳಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಗಳನ್ನು ನಿರ್ವಹಿಸಲು ಈಗಿನಿಂದಲೇ ಯೋಜನೆ ರೂಪಿಸಿಕೊಳ್ಳಬೇಕು ಕೃಷ್ಣ, ಭೀಮಾ ಹಾಗೂ ದೋಣಿ ನದಿಗಳ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಈಗಿನಿಂದಲೇ ಯೋಜನೆ ರೂಪಿಸಿಕೊಳ್ಳುವಂತೆ ಸೂಚನೆ ನೀಡಿದರು.
ಕೃಷ್ಣ ಮತ್ತು ಭೀಮಾ ನದಿಗಳಿಗೆ ಹರಿದು ಬರುವ ನೀರಿನ ಬಗ್ಗೆ ನಿರಂತರ ನಿಗಾ ಇಡಬೇಕು. ಆಲಮಟ್ಟಿ ಸೇರಿದಂತೆ ಸೊನ್ನ ಬ್ಯಾರೇಜ್ ವ್ಯಾಪ್ತಿಯಲ್ಲಿ ನೀರಿನ ಸಮರ್ಪಕ ನಿರ್ವಹಣೆ ಆಗುವಂತೆ ನೋಡಿಕೊಳ್ಳಬೇಕು. ವಿಶೇಷವಾಗಿ ಮಹಾರಾಷ್ಟ್ರದಿಂದ ಭೀಮಾ ನದಿಗೆ ಹರಿದು ಬರುವ ನೀರಿನ ಬಗ್ಗೆ ನಿರಂತರ ನಿಗಾ ಇಡುವ ಜೊತೆಗೆ ಉಜ್ಜನಿ ಜಲಾಶಯ ಸೊನ್ನ ಬ್ಯಾರೇಜ್‍ಗಳ್ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ನಿರ್ವಹಣೆ ಆಗುವಂತೆ ನೋಡಿಕೊಳ್ಳಲು ತಿಳಿಸಿದ ಅವರು ಸೊನ್ನ ಬ್ಯಾರೇಜ್ ನ 29 ಗೇಟ್ ಗಳ ಸುಸ್ಥಿತಿ ಬಗ್ಗೆ ಇಂಡಿ ಉಪವಿಭಾಗಾ ಧಿಕಾರಿಗಳು ಪರಿಶೀಲನಾ ವರದಿ ಸಲ್ಲಿಸಬೇಕು. ಅದರಂತೆ ಈ ಜಲಾಶಯಕ್ಕೆ ಹರಿದು ಬರುವ ನೀರು ಬಿಡುಗಡೆಯಾಗುವ ನೀರು ಕ್ಷೇತ್ರವ್ಯಾಪ್ತಿ, ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಸೇರಿದಂತೆ ಸೂಕ್ತ ನಕಾಶೆ ದೊಂದಿಗೆ ಪ್ರವಾಹ ನಿಭಾಯಿಸಬೇಕಾದ ಕ್ರಮಗಳ ಬಗ್ಗೆ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅತಿವೃಷ್ಟಿ ಮತ್ತು ಪ್ರವಾಹ ನಿರ್ವಹಣೆಗೆ ಯೋಜನೆ ರೂಪಿಸಿಕೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಲು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಸನ್ನದ್ಧಗೊಳ್ಳಬೇಕು. ಯಂತ್ರಚಾಲಿತ ಮಾನವಚಾಲಿತ ಬೋಟ್ ಗಳನ್ನು ಸನ್ನದ್ಧವಾಗಿ ಇಟ್ಟುಕೊಳ್ಳಬೇಕು .ಜನರ ಪ್ರಾಣ ರಕ್ಷಣೆಗೆ ಲೈಫ್ ಜಾಕೆಟ್, ನುರಿತ ಈಜುಗಾರರು, ತುರ್ತು ಸಲಕರಣೆಗಳನ್ನು ಮುಂಚಿತವಾಗಿಯೇ ಸಿದ್ದವಾಗಿಟ್ಟುಕೊಳ್ಳಬೇಕು. ರಕ್ಷಣಾ ಕಾರ್ಯಾಚರಣೆಗಳಿಗೆ ಅಗತ್ಯವಿರುವ ಸಿದ್ಧತೆಗಳನ್ನು ಮುಂಚಿತವಾಗಿಯೇ ಮಾಡಿಕೊಳ್ಳಬೇಕು. ಆಯಾ ತಾಲೂಕು ಮಟ್ಟದ ಅಧಿಕಾರಿಗಳು, ತಹಸೀಲ್ದಾರರು ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು. ಒಟ್ಟಾರೆ ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಿದ್ಧತೆಯನ್ನು ಮಾಡಿಕೊಳ್ಳುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ಮಾತನಾಡಿ ಡೋಣಿ ನದಿಗೆ ಹೆಚ್ಚಿನ ನೀರು ಬರುವ ಮುಂಚೆ ಅಥಣಿ ತಶಿಲ್ದಾರರೊಂದಿಗೆ ಪ್ರತಿದಿನ ಮಳೆ ನೀರಿನ ಪ್ರಮಾಣ ಗಮನಿಸಬೇಕು. ಆಯಾ ಬ್ರಿಡ್ಜ್ ,ಕಲ್ವರ್ಟ್ ವ್ಯಾಪ್ತಿಯಲ್ಲಿ ಅಡ್ಡವಾಗಿ ಬೆಳೆದ ಗಿಡ-ಗಂಟಿಗಳನ್ನು ತೆಗೆದುಹಾಕಬೇಕು. ಅತಿವೃಷ್ಟಿಯಾದಾಗ ಚರಂಡಿ ನೀರು ಕುಡಿಯುವ ನೀರಿಗೆ ಮಿಶ್ರಣ ವಾಗದಂತೆ ನೋಡಿಕೊಳ್ಳುವ ಬಗ್ಗೆ,ಪ್ರವಾಹದಿಂದ ಬಾಧಿತ ವಾಗುವ ಸ್ಥಳಗಳ ಬಗ್ಗೆ ಮುಂಚಿತವಾಗಿ ಗುರುತಿಸಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕೃಷ್ಣಾ ನದಿ ನೀರು ಪ್ರವಾಹ ನಿರ್ವಹಣೆ ಯಂತೆ ಭೀಮಾ ನದಿ ಪ್ರವಾಹ ನಿರ್ವಹಣೆಯ ಬಗ್ಗೆ ವಿಶೇಷ ಗಮನ ನೀಡಬೇಕು. ಮಹಾರಾಷ್ಟ್ರ ರಾಜ್ಯದೊಂದಿಗೆ ಸಂಬಂಧಪಟ್ಟ ಅಧಿಕಾರಿಗಳು ನಿರಂತರ ಸಂಪರ್ಕ ಸಾಧಿಸಿ ಮುಂದಿನ ದಿನಗಳಲ್ಲಿ ಪ್ರವಾಹ ಬಂದಲ್ಲಿ ಸೂಕ್ತ ರೀತಿಯಲ್ಲಿ ನಿರ್ವಹಿಸುವ ಬಗ್ಗೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ್ ಕಳಸದ ವಿವಿಧ ಇಲಾಖೆ ವ್ಯಾಪ್ತಿಯಲ್ಲಿ ಅತಿವೃಷ್ಟಿ ಪ್ರವಾಹ ಬಂದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಮುಂಗಾರು ಮಳೆ (ಮಾನ್ಸೂನ್) ಸಂದರ್ಭವನ್ನು ಸಮರ್ಥಕವಾಗಿ ನಿಭಾಯಿಸುವ ಕುರಿತು ಅಗತ್ಯವಾದ ಎಲ್ಲ ಮುಂಜಾಗೃತಾ ಕ್ರಮ ಹಾಗೂ ರಕ್ಷಣಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಸೂಚನೆಃ ಜಿಲ್ಲಾ ಪಂಚಾಯತಿಯು ಗ್ರಾಮ ಪಂಚಾಯತ್‍ಗಳಲ್ಲಿ ಚರಂಡಿಗಳನ್ನು ಸ್ವಚ್ಚಗೊಳಿಸಿ ನೀರು ಸರಾಗವಾಗಿ ಹರಿಯುವಂತಾಗಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಗ್ರಾಮ ಪಂಚಾಯತಗಳಿಗೆ ಸೂಕ್ತ ನಿರ್ದೇಶನ ನೀಡಬೇಕು, ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಸ್ಥಳೀಯ ಕಂದಾಯ ಅಧಿಕಾರಿಗಳೊಡನೆ ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿಯನ್ನು ನಿಭಾಯಿಸಬೇಕು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಮಗಳಲ್ಲಿ ಇರುವ ತರೆದ ಕೆರೆಗಳನ್ನು ಮತ್ತು ನೀರಿನಗುಂಡಿಗಳ ಸುತ್ತ ತಡೆಬೇಲಿಗಳನ್ನು ಹಾಕುವುದು ಮತ್ತು ಎಚ್ಚರಿಕೆ ಫಲಕಗಳನ್ನು ಅಳವಡಿಸುವ ಬಗ್ಗೆ ಕ್ರಮ ಕೈಗೊಳ್ಳುವುದು, ತಾಲೂಕು ಪಂಚಾಯತ್‍ಗಳಲ್ಲಿ 247 ತುರ್ತು ವಿಪತ್ತು ನಿರ್ವಹಣೆಗಾಗಿ ಕಂಟ್ರೋಲ್ ರೂಮ್ ತೆರೆದು ಅವಶ್ಯಕ ಮಾಹಿತಿ ಇರಿಸುವುದು. ಕಂಟ್ರೋಲ್ ರೂಂ ದೂ. ಸಂ. ಪ್ರಚುರಪಡಿಸಿ ಹಾಗು ತಾಲೂಕು ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿ ಇರಬೇಕು. ಸರ್ಕಾರದ ನಿಯಮದಂತೆ ನದಿ ತೀರದಲ್ಲಿ ಬರುವ 27 ಗ್ರಾಮ ಪಂಚಾಯತಿಗಳ ಗ್ರಾಮ ಪಂಚಾಯತಿ ವಿಪತ್ತು ನಿರ್ವಹಣಾ ಸಮಿತಿಗಳನ್ನು ರಚಿಸಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರು ಈ ವಿಪತ್ತು ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿದ್ದು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸದಸ್ಯರಾಗಿರುತ್ತಾರೆ, ಹಾಗೆಯೇ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಸದಸ್ಯರಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯರು, ಸದಸ್ಯರಾಗಿದ್ದು, ಹಾಗೆಯೇ ಆಡಳಿತ ವೈದ್ಯಾಧಿಕಾರಿಗಳು ಸರ್ಕಾರಿ ಆಸ್ಪತ್ರೆ ಸದಸ್ಯರಾಗಿರುತ್ತಾರೆ. ಶಾಲೆಯ ಮುಖ್ಯೋಪಾಧ್ಯಾಯರು ಕೂಡ ಸದಸ್ಯರು, ನಂತರ ಆರಕ್ಷಕರ ಠಾಣಾ ಉಪನಿರೀಕ್ಷಕರು ಸದಸ್ಯರಾಗಿದ್ದು, ಕೃಷಿ ಸಹಾಯಕರು ಸದಸ್ಯರು. ಗ್ರಾಮಲೆಕ್ಕಿಗರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ. ಹಿರಿಯ ಭೂವಿಜ್ಞಾನಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಜಿಲ್ಲೆಯಲ್ಲಿ ಗಣಿಗಾರಿಕೆ ನಡೆದಂತಹ ಪ್ರದೇಶದಲ್ಲಿ ಆಗಿರುವ ಗುಂಡಿಗಳಲ್ಲಿ ನಿಂತ ನೀರಿನಲ್ಲಿ ಈಜಲು ಹೋಗಿ ಜೀವಹಾನಿ ತಪ್ಪಿಸಲು ಗಣಿಗಾರಿಕೆ ನಡೆಸಿದ ಪ್ರದೇಶಗಳಲ್ಲಿ ಆಗಿರುವ ಗುಂಡಿಗಳಲ್ಲಿ ಈಜುವುದನ್ನು ನಿಷೇಧಿಸಬೇಕು.ಹಾಗೂ ಎಚ್ಚರಿಕೆ ಫಲಕವನ್ನು ಅಳವಡಿಸಬೇಕು. ಗಣಿಗಾರಿಕೆ ಗುಂಡಿಯಲ್ಲಿ ನಿಂತ ನೀರಿನಲ್ಲಿ ಈಜಲು ಹೋಗಿ ಏನಾದರೂ ಅವಘಡ ಸಂಭವಿಸಿದ್ದಲ್ಲಿ ಸಂಬಂಧಪಟ್ಟ ಗಣಿಮಾಲೀಕರು ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಿದರು. ಮಳೆಯಿಂದ ಹಾನಿಯಾಗಿರುವ ರಸ್ತೆ ಸೇತುವೆಗಳ ಬಗ್ಗೆ ಮಾಹಿತಿಯನ್ನು ಪ್ರತಿವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ರಸ್ತೆ ಗುಂಡಿಗಳನ್ನು ಮುಚ್ಚುವ ಬಗ್ಗೆ ಕ್ರಮವಹಿಸಬೇಕು. ಕಾಲು ಸಂಕಗಳ ದುರಸ್ತಿ ಮತ್ತು ಅವುಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಈಗಾಗಲೇ ಮಂಜೂರಾಗಿರುವ ಕಾಲು ಸಂಕಗಳ ರಚನೆ ಕಾಮಗಾರಿಯನ್ನು ತುರ್ತು ಕೈಗೊಂಡು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ರವರಿಗೆ ಸೂಚಿಸಿದರು. ನಂತರ ತುರ್ತು ಸಂದರ್ಭದಲ್ಲಿ ಬೇಕಾದ ವಾಹನಗಳು ಸಲಕರಣೆಗಳು ಮಾನವ ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಲೋಕೋಪಯೋಗಿ ಇಲಾಖೆ ಅವರಿಗೆ ಸೂಚಿಸಿದರು. ಮೀನುಗಾರಿಕೆ ಇಲಾಖೆ ಯವರುನದಿ ತೀರದಲ್ಲಿ ಅವಘಡ ಸಂಭವಿಸುವ ಪ್ರದೇಶಗಳಲ್ಲಿ ಸಮಸ್ಯೆಗಳನ್ನು ಸಂಪೂರ್ಣವಾಗಿ ಇಲಾಖೆಯ ನಿಭಾಯಿಸಬೇಕು. ಜಿಲ್ಲಾಮಟ್ಟದ ತುರ್ತು ವಿಪತ್ತು ನಿರ್ವಹಣೆಗಾಗಿ 247 ನಿಯಂತ್ರಣ ಕೊಠಡಿಗಳನ್ನು 24ಗಂಟೆಗಳ ತುರ್ತು ಕರೆಗಳನ್ನು ಸ್ವೀಕರಿಸಿ ಕ್ರಮ ಕೈಗೊಳ್ಳಬೇಕು. ಮಳೆಗಾಲದ ಮೂರು ತಿಂಗಳ ಕಾಲ ಜಿಲ್ಲಾ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಸೂಚಿಸಿದರು.
ಜಿಲ್ಲೆಯ ಹಾಗೂ ನೆರೆಯ ಮಹಾರಾಷ್ಟ್ರದ ಜಲಾಶಯಗಳ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಕೊಂಡು ಜಲಾಶಯ ಮಟ್ಟ ಹಾಗೂ ನೀರು ಬಿಡುಗಡೆ ಬಗ್ಗೆ ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಳ್ಳಲು ಹಾಗೂ ಜಲಾಶಯಗಳಿಂದ ನೀರು ಬಿಡುಗಡೆ ಕುರಿತು ಮುಂಚಿತವಾಗಿ ಜನರಿಗೆ ತಿಳಿಸುವ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಬೇಕು ಎಂದು ಆಲಮಟ್ಟಿ ಜಲಾಶಯ ಅಧಿಕಾರಿಗಳಿಗೆ ತಿಳಿಸಿದರು.
ಪೌರಾಯುಕ್ತ ನಗರಸಭೆ ಹಾಗೂ ಮುಖ್ಯಾಧಿಕಾರಿ ಪುರಸಭೆ ಪಟ್ಟಣ ಪಂಚಾಯತ್ ವಿಜಯಪುರ ಅಧಿಕಾರಿಗಳಿಗೆ ಮಳೆಗಾಲ ಪ್ರಾರಂಭವಾಗುವ ಮುನ್ನ ಜಿಲ್ಲೆಯ ಎಲ್ಲಾ ಗ್ರಾಮೀಣ ನಗರ ಸ್ಥಳೀಯ ಪ್ರದೇಶ ವ್ಯಾಪ್ತಿಯಲ್ಲಿ ಚರಂಡಿಗಳನ್ನು ಹಾಗೂ ತೋಡುಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಆಗಲು ಕ್ರಮ ಕೈಗೊಳ್ಳಬೇಕು. ಹಾಗೂ ಮಳೆಗಾಲದಲ್ಲಿ ಸ್ವಚ್ಛತೆಯನ್ನು ಕಾಪಾಡಿ ರೋಗರುಜಿನಗಳು ಹರಡದಂತೆ ಎಚ್ಚರಿಕೆ ವಹಿಸಲು ಸಲಹೆ ನೀಡಿದರು . ಕಂಟ್ರೋಲ್ ರೂಮ್ ಗಳನ್ನು ದಿನದ 24 ಗಂಟೆ ತೆರೆದಿಡಲು ಹಾಗೂ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳು ತಾಲೂಕು ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಹೇಳಿದರು.
ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳಿಗೆ ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬರುವ ಸಮಸ್ಯೆಗಳನ್ನು ಪರಿಹರಿಸಲು ಮೊಂನ್ಸೂನ್ ಟಾಸ್ಕ್ ಫೆÇೀರ್ಸ್ ಟೀಮ್ ಗಳನ್ನು ರಚಿಸಿ ಸೂಕ್ತ ಕ್ರಮ ವಹಿಸಲು ಮತ್ತು ದೂರವಾಣಿ ಸಂಖ್ಯೆಯನ್ನು ತುರ್ತು ಸಂಪರ್ಕಕ್ಕೆ ಪ್ರಚುರಪಡಿಸುವುದು ಹಾಗೂ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿರುವ ಮರಗಳು ಬಿದ್ದಾಗ ತುರ್ತು ಕಾರ್ಯಾಚರಣೆ ಕೈಗೊಳ್ಳಬೇಕು ಹಾಗೂ ಹೆದ್ದಾರಿಯಿಂದ ಯಾವುದೇ ರೀತಿಯ ಸಾರ್ವಜನಿಕರಿಗೆ ತೊಂದರೆ ಅಡಚಣೆಯಾಗದಂತೆ ಮಳೆಗಾಲದ ಸಂದರ್ಭವನ್ನು ನಿಭಾಯಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು .ಮೋರಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲು ಕೃತಕ ನೆರೆ ಉಂಟಾಗದಂತೆ ಕ್ರಮ ವಹಿಸಬೇಕು ಹಾಗೂ ರಸ್ತೆಗಳಿಗೆ ಸರಿಯಾದ ನಾಮಫಲಕಗಳು ಮತ್ತು ಮಾರ್ಗಸೂಚಿಗಳನ್ನು ಅಳವಡಿಸುವುದರ ಜೊತೆಗೆ ರಸ್ತೆಯ ಬದಿಯಲ್ಲಿ ಅನುಮತಿ ಇಲ್ಲದೆ ಹಾಕಿರುವ ಬ್ಯಾನರ್ ಗಳನ್ನು ತೆರವು ಗೊಳಿಸಿ, ರಸ್ತೆ ಸುತ್ತಮುತ್ತಲು ಯಾವುದೇ ವಸ್ತುಗಳನ್ನು ರಾಶಿ ಹಾಕದಂತೆ ನೋಡಿಕೊಳ್ಳಬೇಕು. ಅನಧಿಕೃತ ರಸ್ತೆ ತಿರುವುಗಳನ್ನು ಮಾಡಬಾರದು ಹಾಗೂ ಅವುಗಳನ್ನು ಮುಚ್ಚಬೇಕು. ಮಳೆಗಾಲದಲ್ಲಿ ಆಗುವ ಅನಾಹುತಗಳ ಬಗ್ಗೆ ಸೂಕ್ತ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಂಡು ಒಂದು ವಾರದಲ್ಲಿ ವರದಿ ಸಲ್ಲಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು.
ಹೆದ್ದಾರಿ, ರಸ್ತೆ ಕಟ್ಟಡಗಳ ಮೇಲೆ ಮಳೆ ಬಂದಾಗ, ಗಾಳಿ ಮಳೆಯಿಂದ ದೊಡ್ಡ ದೊಡ್ಡ ಮರಗಳು ಉರುಳಿ ಬಿದ್ದರೆ ತಕ್ಷಣ ಸ್ಪಂದಿಸಿ ಮರಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ರಸ್ತೆಗಳನ್ನು ಅನುವುಮಾಡಿಕೊಡಬೇಕು. ಈ ಕೆಲಸಕಾರ್ಯಗಳಿಗೆ ಎಲ್ಲ ಇಲಾಖೆಗಳು ಸಮನ್ವಯತೆ ಮಾಡಿಕೊಳ್ಳುವುದು ಅವಶ್ಯಕ. ವಿದ್ಯುತ್ ತಂತಿಗಳಿಗೆ ಅಪಾಯಕಾರಿಯಾಗಿರುವ ಮರದ ಕೊಂಬೆಗಳನ್ನು ಕಡಿಯಲು ಬೇರುಗಳ ಮೇಲೆ ಬಂದು ಬೀಳುವ ಹಂತದಲ್ಲಿರುವ ಮರಗಳನ್ನು ತೆರವುಗೊಳಿಸುವ ಬಗ್ಗೆ ಅರಣ್ಯ ಇಲಾಖೆ ಹಾಗೂ ಸಾರಿಗೆ ಇಲಾಖೆ ಪೆÇಲೀಸ್ ಇಲಾಖೆ ಹಾಗೂ ಮೆಸ್ಕಾಂ ಅಧಿಕಾರಿಗಳ ಸಭೆ ಕರೆದು ಸಮನ್ವಯತೆಯಿಂದ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಎಲ್ಲ ಕಾಯಿಲೆಗಳಿಗೆ ಬೇಕಾಗುವ ಔಷಧಿ ಚುಚ್ಚುಮದ್ದು ಇತ್ಯಾದಿ ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಿಸಿಕೊಂಡು ಆರೋಗ್ಯ ಇಲಾಖೆಯ ಕಂಟ್ರೋಲ್ ರೂಮ್ ಗಳನ್ನು ದಿನದ 24 ಗಂಟೆ ತೆರೆಯಬೇಕು. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸನ್ನದ್ಧವಾಗಿರುವಂತೆ ಸೂಕ್ತ ನಿರ್ದೇಶನ ನೀಡಬೇಕು, ಜೊತೆಗೆ ಆಂಬುಲೆನ್ಸ್ ಗಳ ವೈದ್ಯಕೀಯ ಸೌಲಭ್ಯಗಳ ಸಹಿತ ಸಿದ್ಧತೆಯಲ್ಲಿರಲು ಹಾಗೂ ಮಳೆಗಾಲದಲ್ಲಿ ಜನರ ಅಸಹಜ ಸಾವು ಸಂಭವಿಸಿದರೆ ಮರಣೋತ್ತರ ವರದಿಯನ್ನು ಕೂಡಲೇ ಒದಗಿಸಬೇಕು. ಕೋವಿಡ್ 19, ಡೆಂಗ್ಯೂ, ಮಲೇರಿಯಾ ಮುಂತಾದ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಗಾಲದ ತುರ್ತು ಸಂದರ್ಭಗಳಲ್ಲಿ ಅಗತ್ಯವಿದ್ದಾಗ ಕಾಳಜಿ ಕೇಂದ್ರಗಳ ಸ್ಥಾಪನೆ ವ್ಯವಸ್ಥೆಗೆ ಸೂಕ್ತ ಶಾಲಾ ಕಟ್ಟಡಗಳನ್ನು ಒದಗಿಸಲಾಗುವುದು. ಶಾಲಾ ಪ್ರಾರಂಭವಾಗುವ ಮೊದಲು ಶಿಕ್ಷಣ ಇಲಾಖೆಯವರು ಮತ್ತು ಪೆÇಲೀಸ್ ಇಲಾಖೆ ಶಾಲಾ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಶಾಲಾ ವಾಹನ ಚಾಲಕರು ಮತ್ತು ಮಕ್ಕಳ ಪೆÇೀಷಕರ ಸಭೆ ನಡೆಸಿ ಶಾಲಾ ವಾಹನದಲ್ಲಿ ಮಕ್ಕಳನ್ನು ಕಳುಹಿಸುವ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಈ ಬಗ್ಗೆ ಕಚೇರಿಗೆ ಮಾಹಿತಿಯನ್ನು ನೀಡಬೇಕೆಂದು ಶಿಕ್ಷಣ ಇಲಾಖೆಯವರಿಗೆ ಸೂಚಿಸಿದರು.
ಹೆಸ್ಕಾಂದವರು ಮಳೆಗಾಲದಲ್ಲಿ ಮರಗಳು ಬಿದ್ದು ವಿದ್ಯುತ್ ಸ್ಥಗಿತಗೊಂಡರೆ ತಕ್ಷಣ ಪುನರ್ ಸಂಪರ್ಕ ಬಗ್ಗೆ ಕ್ರಮ ಕೈಗೊಳ್ಳಬೇಕು. ಹಾಗೂ ತುರ್ತು ಕೆಲಸಗಳ ನಿರ್ವಹಣೆಗಾಗಿ ಕಂಟ್ರೋಲ್ ರೂಮ್ ತೆರೆದು ದೂರವಾಣಿಸಂಖ್ಯೆ ಸಾರ್ವಜನಿಕರಿಗೆ ತಿಳಿಸಬೇಕು ಮತ್ತು ಮರಗಳ ಅಪಾಯಕಾರಿ ಕೊಂಬೆಗಳನ್ನು ಕಡಿಯಲು ಕ್ರಮವಹಿಸುವುದು ಜೊತೆಗೆ ಈ ಬಗ್ಗೆ ಯಾವುದೇ ದೂರುಗಳು ಬರದಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.
ಪಶು ಸಂಗೋಪನಾ ಇಲಾಖೆಯವರು ಮಳೆಗಾಲದಲ್ಲಿ ಪ್ರಾಣಿಗಳ ಅಸಹಜ ಸಾವು ಸಂಭವಿಸಿದರೆ ಮರಣೋತ್ತರ ವರದಿಯನ್ನು ಕೂಡಲೇ ಒದಗಿಸುವುದು. ಪ್ರಾಣಿಗಳಿಗೆ ಸಾಂಕ್ರಾಮಿಕ ರೋಗಗಳು ಹರಡದಂತೆ ನಿರ್ವಹಿಸುವುದರ ಜೊತೆಗೆ ಸಾಕುಪ್ರಾಣಿಗಳಿಗೆ ಸಾಂಕ್ರಾಮಿಕ ರೋಗಗಳು ಹರಡದಂತೆ ಚುಚ್ಚುಮದ್ದುಗಳನ್ನು ನೀಡಬೇಕು ಎಂದು ಸಲಹೆ ನೀಡಿದರು.
ಸಣ್ಣ ನೀರಾವರಿ ಇಲಾಖೆ ಯವರು ತಗ್ಗುಪ್ರದೇಶಗಳಲ್ಲಿ ಸೇತುವೆಗಳ ಬದಿಗಳಲ್ಲಿ ಕೆರೆಯ ಒಡ್ಡುಗಳು ಶಿಥಿಲ ವ್ಯವಸ್ಥೆಯಲ್ಲಿ ಇರುವುದನ್ನು ಪತ್ತೆ ಹಚ್ಚಬೇಕು ಹಾಗೂ ಕ್ರಮ ಕೈಗೊಳ್ಳಬೇಕು. ಮಳೆಗಾಲದಲ್ಲಿ ನದಿಗಳು ನೀರು ಸರಾಗವಾಗಿ ಹರಿದು ಹೋಗಲು ಅವಕಾಶ ಕಲ್ಪಿಸಬೇಕು ಎಂದು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಅಗ್ನಿಶಾಮಕ ದಳವು ಮಳೆಗಾಲಕ್ಕೆ ರಕ್ಷಣಾ ಸಾಮಗ್ರಿಗಳೊಂದಿಗೆ ಸನ್ನದ್ಧರಾಗಿರಬೇಕು. ನೆರೆ ಉಂಟಾದಲ್ಲಿ ಅವಶ್ಯಕ ಸಲಕರಣೆಗಳ ಶೇಖರಣೆ ಮಾಡಿಕೊಳ್ಳಬೇಕು. ಮುಳುಗುವ ತಜ್ಞರ- ಈಜುಗಾರರ ಸಂಪರ್ಕ ಮೊಬೈಲ್ ನಂಬರ್ ಮತ್ತು ಅವಶ್ಯಕ ವಿರುವ ಎಲ್ಲಾ ಪರಿಕರಗಳನ್ನು ಉಳಿಸಿಕೊಳ್ಳುವುದರ ಜೊತೆಗೆ ಈ ಹಿಂದೆ ನೀಡಿರುವ ರಕ್ಷಣಾ ಸಾಮಗ್ರಿಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು.ಹೆಚ್ಚಿನ ರಕ್ಷಣಾ ಸಾಮಗ್ರಿಗಳ ಅವಶ್ಯಕತೆಯಿದ್ದಲ್ಲಿ ವರದಿಯನ್ನು ನೀಡುವಂತೆ ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲ ತಹಸೀಲ್ದಾರರು ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾಕೃತಿಕ ವಿಕೋಪ ಪರಿಹಾರ ಪಾವತಿಗೆ ಸಂಬಂಧಿಸಿದ ತಾಲ್ಲೂಕು ತಹಶೀಲ್ದಾರರಿಗೆ ಬಿಡುಗಡೆ ಮಾಡಿರುವ ಅನುದಾನದಿಂದ ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೆ ಪರಿಹಾರ ಪಾವತಿ ಮಾಡುವುದು, ಕಚೇರಿಗಳಲ್ಲಿ ತುರ್ತು ವಿಪತ್ತು ನಿರ್ವಹಣೆಗಾಗಿ ಕಂಟ್ರೋಲ್ ರೂಮ್ ತೆರೆದು 24 ಗಂಟೆ ಕಂಟ್ರೋಲ್ ರೂಂ ಗಳಲ್ಲಿ ಕರ್ತವ್ಯ ನಿರ್ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಬೇಕು. ಪ್ರತಿ ದಿನ ಮಳೆ ಮತ್ತು ಹಾನಿಯ ವರದಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ದೂರವಾಣಿ ಸಂಖ್ಯೆಗಳನ್ನು ನೀಡಬೇಕು, ತಾಲೂಕು ಮಟ್ಟದಲ್ಲಿ ಮಳೆಗಾಲವನ್ನು ನಿಭಾಯಿಸಲು ವಿವಿಧ ಸಮಿತಿಗಳನ್ನು ರಚಿಸಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಈ ಹಿಂದಿನ ವರ್ಷಗಳಲ್ಲಿ ಹೆಚ್ಚಿನ ಪ್ರವಾಹ ಬಂದಿರುವ ಪ್ರದೇಶಗಳಲ್ಲಿ ಸೂಕ್ತ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು. ತಾಲೂಕುಗಳಲ್ಲಿ ಲಭ್ಯವಿರುವ ಬೋಟುಗಳ ಮತ್ತು ಈಜುಗಾರರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ತುರ್ತು ನಿಗಾ, ಅಗತ್ಯವಾಗಿ ಬೇಕಾಗಿರುವ ಸಾಮಗ್ರಿ ಮತ್ತು ಕಮ್ಯುನಿಕೇಷನ್ ಪ್ಲಾನ್ ಗ್ರಾಮವಾರು ತಯಾರಿ ವಿವರವನ್ನು ನೀಡುವುದು. ಸೂಕ್ತ ಪ್ರದೇಶದಲ್ಲಿ ಕಾಳಜಿ ಕೇಂದ್ರವನ್ನು ಗುರುತಿಸಿ ಸನ್ನದ್ಧ ಸ್ಥಿತಿಯಲ್ಲಿ ಇಟ್ಟು ಕೊಳ್ಳುವುದರ ಜೊತೆಗೆ ಕಾಳಜಿ ಕೇಂದ್ರಗಳನ್ನು ನಿಭಾಯಿಸಲು ಬೇಕಾದ ಕನಿಷ್ಠ ಸಿಬ್ಬಂದಿಗಳನ್ನು ಗುರುತಿಸಬೇಕು. ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳ ಸಭೆ ಕರೆದು ಈ ಬಗ್ಗೆ ಸೂಕ್ತ ಮುಂಜಾಗೃತ ಕ್ರಮ ತೆಗೆದುಕೊಳ್ಳಬೇಕು. ಹಾಗೂ ಗ್ರಾಮ ಕಂದಾಯ ನಿರೀಕ್ಷಕರು ಮಳೆಯ ಹಾನಿಯ ಬಗ್ಗೆ ಪ್ರತಿದಿನ ವರದಿ ನೀಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳಾದ ರಾಹುಲ್ ಸಿಂಧೆ. ಬಲರಾಮ್ ಲಮಾಣಿ. ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ತಹಸೀಲ್ದಾರರು ಉಪಸ್ಥಿತರಿದ್ದರು.