ಮುಂಬರುವ ಕುಡಿಯುವ ನೀರಿನ ಸಮಸ್ಯೆಯಾಗದಂತೆಕ್ರೀಯಾಯೋಜನೆ ರೂಪಿಸಿ ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸಚಿವ ಡಾ.ಎಂ.ಬಿ.ಪಾಟೀಲ ಸೂಚನೆ

ವಿಜಯಪುರ ಅ.17: ಜನರ ಆಶೋತ್ತರಗಳಿಗೆ ಹಾಗೂ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾಯೋನ್ಮುಖರಾಗಬೇಕೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ ಕುರಿತು ಸೋಮವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ 12 ತಾಲೂಕುಗಳನ್ನು ತೀವ್ರ ಬರ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ತಿಕೋಟಾ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಎನ್.ಡಿ ಆರ್.ಎಫ್ ಮಾನದಂಡದಿಂದಾಗಿ ಬರ ಎಂದು ಘೋಷಣೆ ಆಗದೇ ಇರುವುದರಿಂದ ಇತರ ಮಾನದಂಡಗಳನ್ನು ಪರಿಗಣಿಸಿ ತಿಕೋಟಾ ತಾಲೂಕನ್ನು ಬರ ಘೋಷಣೆ ಮಾಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಮುಂಬರುವ ದಿನಗಳಲ್ಲಿ ಬರ ಘೋಷಣೆಯಾಗಲಿದೆ ಎಂದು ತಿಳಿಸಿದ ಸಚಿವರು, ಜಿಲ್ಲೆಯಲ್ಲಿ ಡಿಸೆಂಬರ್ 15ರಿಂದ ಜೂನ್ ಅವಧಿಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಬಹುದಾಗಿರುವುದರಿಂದ ಈಗಿನಿಂದಲೇ ಕುಡಿಯುವ ನೀರಿಗಾಗಿ ಸೂಕ್ತ ಕ್ರ್ರೀಯಾ ಯೋಜನೆ ಸಿದ್ಧಪಡಿಸಿಕೊಂಡು, ಆದ್ಯತೆ ನೀಡಿ, ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಒಟ್ಟು ಮೂರು ಗ್ರಾಮಗಳಿಗೆ ಪ್ರತಿ ದಿನ 5 ಟ್ಯಾಂಕರ್ 6 ಟ್ರಿಪ್‍ಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಖಾಸಗಿ ಬೋರವೆಲ್‍ಗಳನ್ನು ಗುರುತಿಸಿಕೊಳ್ಳಬೇಕು. ನೀರಿನ ಇಳುವರಿ ನೋಡಿಕೊಂಡು ಅವಶ್ಯಕತೆಯನುಸಾರ ಬೋರವೆಲ್ ಕೊರೆಸಲು ಕ್ರಮ ವಹಿಸಬೇಕು. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದರೆ ಟ್ಯಾಂಕರ ಮೂಲಕ ನೀರು ಸರಬರಾಜುವಿಗೆ ಈಗಾಗಲೇ ರಚನೆÉಯಾಗಿರುವ ಟಾಸ್ಕಪೋರ್ಸ ಮೂಲಕ ತೀರ್ಮಾನಿಸಿ ಕ್ರಮ ಕೈಗೊಳ್ಳಬೇಕು. ಜಾನುವಾರುಗಳಿಗೆ ಡಿಸೆಂಬರ್ 10ರ ವರೆಗೆ ಯಾವುದೇ ಮೇವಿನ ಕೊರತೆ ಇರುವುದಿಲ್ಲ. ಮೇವಿನ ಕೊರತೆಯಾಗದಂತೆ ಹಾಗೂ ಜಾನುವಾರಗಳಿಗೆ ಲಸಿಕೆ ನೀಡಲು ಸಾಕಷ್ಟು ದಾಸ್ತಾನಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವರ್ಷ ಬರಗಾಲ ಇರುವುದರಿಂದ ಮಳೆಯಾಗದೇ ಜಮೀನು ಹೊಂದಿದ ರೈತರು ಕಷ್ಟ ಪಡಬಾರದೆಂಬ ದೃಷ್ಟಿಯಿಂದ ಬೇಡಿಕೆಯನುಸಾರ ನರೇಗಾ ಯೋಜನೆಯಡಿ ಸ್ಪಂದಿಸಿ ಉದ್ಯೋಗ ನೀಡುವ ಮೂಲಕ ರೈತನ ಬಾಳಿಗೆ ಆಸರೆಯಾಗಬೇಕು. ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಕೆಲಸ ಕೇಳುವ ಪ್ರತಿಯೊಬ್ಬರಿಗೂ ಉದ್ಯೋಗ ನೀಡಬೇಕು. ಹೆಚ್ಚೆಚ್ಚು ಮಾನವ ದಿನಗಳನ್ನು ಸೃಜಿಸಬೇಕು. ಕಷ್ಟಕಾಲದಲ್ಲಿ ಜನಸಾಮಾನ್ಯರ ಸಹಾಯಕ್ಕೆ ಅಧಿಕಾರಿಗಳು ಧಾವಿಸಬೇಕು. ನರೇಗಾದಡಿ ಉದ್ಯೋಗ ನೀಡಲು ನಿರಾಕರಿಸಬಾರದು. ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬರ ಪರಿಸ್ಥಿತಿಯ ಕುರಿತು ಪ್ರತಿ 15 ದಿನಗಳಿಗೊಮ್ಮೆ ಪ್ರಗತಿ ಪರಿಶೀಲನೆ ನಡೆಸಲಾಗುವುದು. ಕುಡಿಯುವ ನೀರು, ವಿದ್ಯುತ್ ಸಮಸ್ಯೆ ನರೆಗಾ ಯೋಜನೆಯಡಿ ಉದ್ಯೋಗ ನೀಡುವ ಕುರಿತು ಯಾವುದೇ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿ ಮಟ್ಟಗಳಲ್ಲಿ ನಿರಂತರ ಸಭೆ ನಡೆಸಿ, ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಂಡು ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಹೆಚ್ಚುವರಿ ಅವಧಿಗೆ ಕಾರ್ಯ ನಿರ್ವಹಿಸಬೇಕು ಆಗಾಗ ಅಧಿಕಾರಿಗಳು ಕ್ಷೇತ್ರ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಬೇಕು ಮತ್ತು ಸಮಸ್ಯೆಗೆÉ ಪರಿಹಾರ ಒದಗಿಸಬೇಕು. ಜಿಲ್ಲೆಯ ಎಲ್ಲ ಅಧಿಕಾರಿಗಳು ದೂರವಾಣಿ ಕರೆಗಳಿಗೆ ಸ್ಪಂದಿಸಬೇಕು. ಕುಡಿಯುವ ನೀರಿನ ವಿಷಯದಲ್ಲಿ ನಿರ್ಲಕ್ಷ್ಯವಹಿಸದೇ ಗಂಭೀರವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವಿಜಯಪುರ ನಗರದಲ್ಲಿ ಎಲ್ಲ ವಾರ್ಡ್‍ಗಳಲ್ಲಿಯೂ ಸಮರ್ಪಕವಾಗಿ ನೀರು ಪೂರೈಕೆಯಾಗಬೇಕು. ನಗರದಲ್ಲಿರುವ ಐತಿಹಾಸಿಕ ಬಾವಿಗಳಲ್ಲಿರುವ ನೀರನ್ನು ಬಳಸಿಕೊಳ್ಳುವುದರಿಂದ ಶೇ 80 ರಷ್ಟು ನೀರಿನ ಅಭಾವ ಕಡಿಮೆಯಾಗುತ್ತದೆ. ಈಗಾಗಲೇ ಕೆಡಿಪಿ ಸಭೆಯಲ್ಲಿ ಸೂಚಿಸಲಾಗಿದೆ. ಈ ಬಗ್ಗೆ ಪ್ರತ್ಯೇಕವಾಗಿ ಸಭೆ ನಡೆಸಲಾಗುವುದು ಎಂದು ಹೇಳಿದರು.
ಜಿಲ್ಲೆಯ ಪಟ್ಟಣ ಪಂಚಾಯತಿ ಹಾಗೂ ಪುರಸಭೆಗಳಲ್ಲಿ ಸಧ್ಯಕ್ಕೆ ಯಾವುದೇ ನೀರಿನ ಸಮಸ್ಯೆ ಇರುವುದಿಲ್ಲ. ಎಂದು ಸಭೆಗೆ ಮಾಹಿತಿ ನೀಡಿದರು. ಕೃಷಿ ಹಾಗೂ ತೋಟಗಾರಿಕೆಯ 492247 ಲಕ್ಷ ಹೆಕ್ಟರ್‍ನಷ್ಟು ಪ್ರದೇಶ ಬೆಳೆ ಹಾನಿಯಾಗಿದ್ದು, 54634 ಲಕ್ಷ ರೂಗಳ ಎನ್.ಡಿ.ಆರ್‍ಎಫ್ ಸಹಾಯಕ್ಕಾಗಿ ಮನವಿ ಸಲ್ಲಿಸಲಾಗಿದೆ. ಎನ್.ಡಿ ಆರ್.ಎಫ್ ರಾಷ್ಟ್ರೀಯ ವಿಫತ್ತು ಪರಿಹಾರ ನಿಧಿ ಮಾರ್ಗ ಸೂಚಿಯ ಬದಲಾವಣೆಗಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ 6 ಸಾವಿರ ಮೆಗಾವ್ಯಾಟ್ ವಿದ್ಯುತ್ ಬೇಡಿಕೆಯಿದ್ದು, ಆದಾಗ್ಯೂ ನೀರಾವರಿ ಪಂಪಸೆಟ್‍ಗಳಿಗೆ 3 ಬ್ಯಾಚ್‍ಗಳಲ್ಲಿ ಐದು ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಕೆಗೆ ಕ್ರಮವಹಿಸಲಾಗಿದೆ. ಕೆಲವು ವಿತರಣಾ ಕೇಂದ್ರಗಳಲ್ಲಿ ಸಾಮಥ್ರ್ಯ ಕಡಿಮೆ ಇರುವುದರಿಂದ 2 ವಿಭಾಗಗಳಲ್ಲಿ ವಿಂಗಡಿಸಿ ಹಗಲು ವೇಳೆಯಲ್ಲಿ 3ಗಂಟೆ ಹಾಗೂ ರಾತ್ರಿ ವೇಳೆಯಲ್ಲಿ 2 ಗಂಟೆ ಸೇರಿದಂತೆ ನಿರಂತರವಾಗಿ 5 ಗಂಟೆಗಳ ಕಾಲ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಲಾಗಿದೆ. ನವೆಂಬರ 1ರಿಂದ ಜಿಲ್ಲೆಯಲ್ಲಿ ಕಾರ್ಖಾನೆÉಗಳು ಕಬ್ಬು ನುರಿಸುವ ಹಂಗಾಮು ಪ್ರಾರಂಭದಿಂದ, 178 ಮೆ.ವ್ಯಾ. ವಿದ್ಯುತ್ ಜಿಲ್ಲೆಯಿಂದ ಉತ್ಪಾದನೆಯಾಗುವ ವಿದ್ಯುತ್ ಬಳಕೆಯಿಂದ ವಿದ್ಯುತ್ ಬೇಡಿಕೆ ಕಡಿಮೆಯಾಗಲಿದೆ. 2 ಲಕ್ಷ ಟನ್ ಕಲ್ಲಿದ್ದಲು ಆಮದು ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರೋಷನ್ ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಜನವರಿ 2023ರಿಂದ ಅಕ್ಟೋಬರ್ 14ರ ವರೆಗೆ ವಾಡಿಕೆ ಮಳೆ 528 ಮಿ.ಮಿ ಇದ್ದು 390 ಮಿ.ಮಿ ಮಳೆಯಾಗಿದ್ದು 26 ಪ್ರತಿಶತ ಕಡಿಮೆಯಾಗಿದೆ. 736794 ಹೆಕ್ಟೆರಿನಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. 642827 ಹೆಕ್ಟೇರ ಪ್ರದೇಶದಲ್ಲಿ ಶೇ 87.25ರಷ್ಟು ಬಿತ್ತನೆಯಾಗಿರುತ್ತದೆ. ಇದರಲ್ಲಿ ಜಿಲ್ಲೆಯಲ್ಲಿ ತೊಗರಿ ಹೆಚ್ಚು 366407 ಹೆಕ್ಟೇರ್ ಬಿತ್ತನೆಯಾಗಿದೆ. ಮಕ್ಕೆಜೋಳ 95833, ಸಜ್ಜೆ 9569, ಸೂರ್ಯಕಾಂತಿ 2003, ಹತ್ತಿ 53676 ಬಿತ್ತನೆಯಾಗಿದೆ. 26736 ಕ್ವಿಂಟಾಲ್ ಬಿತ್ತನೆ ಬೀಜ ಹಾಗೂ 44545 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇರುತ್ತದೆ. ಸಧ್ಯ ಕೊರತೆ ಇರುವುದಿಲ್ಲ ಎಂದು ಕೃಷಿ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.
ಬೊಮ್ಮಣಜೋಗಿ, ಪುರದಾಳ ಕೆರೆಗೆ ನೀರು ಒದಗಿಸುವ ಮೂಲಕ ಅನುಕೂಲ ಕಲ್ಪಿಸಿಕೊಡಬೆಕೆಂದು ದೇವರ ಹಿಪ್ಪರಗಿ ಶಾಸಕರಾದ ರಾಜು ಪಾಟೀಲ ಮಾತಿಗೆ ಸ್ಪಂದಿಸಿದ ಸಚಿವರು ಕೊನೆಯ ಹಂತದ ವರೆಗೆ ನೀರು ಹರಿಸಲು ಕ್ರಮ ವಹಿಸಬೇಕು ಹಾಗೂ ಕಾಲುವೆ ನೀರು ಪೋಲಾಗದಂತೆ ನೋಡಿಕೊಳ್ಳಲು ನರಂತರ ನಿಗಾ ವಹಿಸುವಂತೆ ಪೋಲಿಸ ಅಧಿಕಾರಿಗಳಿಗೆ ಸೂಚಿಸಿದರು.
ವಿದ್ಯುತ್, ಕೃಷಿ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ಬಿತ್ತನೆ ಹಾಗೂ ಬೆಳೆ ಹಾನಿ ವಿವರ, ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಲ್ಲಿರುವ ನೀರಿನ ಸಂಗ್ರಹ ಹಿಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬೇಡಿಕೆ, ನರೆಗಾ ಯೋಜನೆ, ಉದ್ಯೋಗ ನೀಡುವ ಕುರಿತಾಗಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಸಿಂದಗಿ ಶಾಸಕ ಅಶೋಕ ಮನಗೂಳಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.