ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಧಿಕಾರಿಗಳುಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಬೀದರ: ಫೆ. 28: ಲೋಕಸಭಾ ಸಾರ್ವತ್ರಿಕ ಚುನಾವಣೆ- 2024 ಇನ್ನೂ ಕೆಲವೆ ತಿಂಗಳಲ್ಲಿ ಬರುತ್ತಿದ್ದು ಚುನಾವಣೆಗೆ ನಿಯೋಜಿತ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು.
ಅವರು ಮಂಗಳವಾರ ಚನ್ನಬಸವ ಪಟ್ಟದ್ದೆವರು ಜಿಲ್ಲಾ ರಂಗಮಂದಿರದಲ್ಲಿ ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಿಯೋಜಿತ ಎಫ್.ಎಸ್.ಟಿ. ಎಸ್.ಎಸ್.ಟಿ. ವಿ.ವಿ.ಟಿ ಹಾಗೂ ವಿ.ಎಸ್.ಟಿ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳಿಗಾಗಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರತಿಯೊಂದು ತಂಡದ ಸದಸ್ಯರು ತಮಗೆ ವಹಿಸಿದ ಕರ್ತವ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಹಾಗೂ ತಮ್ಮ ಪರವಾಗಿ ಯಾರಿಗಾದರೂ ಕಳಿಸುವದು ಮತ್ತು ಒಂದು ತಂಡದಿಂದ ಮತ್ತೊಂದು ತಂಡದಲ್ಲಿ ಬದಲಾವಣೆ ಮಾಡಲು ಸಾಧ್ಯವಿಲ್ಲ ಈಗಾಗಲೇ ತಮಗೆ ನಿಯೋಜಿತ ಕೆಲಸದಲ್ಲಿ ಕರ್ತವ್ಯ ನಿರ್ವಹಿಸಬೇಕು ಅನಿವಾರ್ಯ ಕಾರಣವಿದ್ದಾಗ ಮಾತ್ರ ತಮ್ಮ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಹಾಗೂ ಇದು ಚುನಾವಣೆಯ ಕರ್ತವ್ಯವಾಗಿದ್ದು ಯಾರು ಬೇಜವಾಬ್ದಾರಿ ತೋರಿಸುವ ಹಾಗಿಲ್ಲ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದರು.
ಎಲೆಕ್ಷನ್ ಸೀಜರ್ ಮ್ಯಾನೇಜಮೆಂಟ್ ಸಿಸ್ಟಮ್ ಎಂಬ ಹೊಸದಾಗಿ ಆ್ಯಪ್ ಬಂದಿದ್ದು ಇದರ ಬಗ್ಗೆಯೂ ತಾವು ತಿಳಿದುಕೊಳ್ಳಬೇಕು ಮತ್ತು ಸಿ- ವಿಜಿಲ್ ಆ್ಯಪ್ ಬಗ್ಗೆ ಮತ್ತೊಮ್ಮೆ ತಮಗೆ ತರಬೇತಿ ನೀಡಲಾಗುತ್ತದೆ.ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ ಒಬ್ಬ ವ್ಯಕ್ತಿ 50 ಸಾವಿರದ ವರೆಗೆ ಹಾಗೂ ಸ್ಟಾರ್ ಕ್ಯಾಂಪೆನರಗೆ ಒಂದು ಲಕ್ಷದವರಗೆ ಹಣದ ತೆಗೆದುಕೊಂಡು ಹೋಗಲು ಮಿತಿ ಇರುತ್ತದೆ ಇಂತಹ ಹಲವಾರು ಮಾಹಿತಿಗಳನ್ನು ತಾವು ತಿಳಿದುಕೊಳ್ಳಬೇಕೆಂದರು.
ಎ.ಆರ್.ಓ ಗಳು ಸಭೆ, ಸಮಾರಂಭ ಹಾಗೂ ಮೆರವಣಿಗೆಗಳಿಗೆ ಅನುಮತಿ ನೀಡಿದರೆ. ಆರ್.ಓಗಳು ಚುನಾವಣಾ ಪ್ರಚಾರ ವಾಹನಗಳಿಗೆ ಅನುಮತಿ ನೀಡಬೇಕು ಮತ್ತು ಚುನಾವಣಾ ಸಂಬಂಧಿಸಿದ ಪ್ರಚಾರ ಸಾಮಗ್ರಿಗಳನ್ನು ಅನುಮತಿ ಪಡೆದ ವಾಹನಗಳಲ್ಲಿ ಸಾಗಿಸಲು ಅವಕಾಶವಿರುತ್ತದೆ. ಚುನಾವಣಾ ಪ್ರಚಾರ ಕಾರ್ಯಕ್ರಮ ರಾತ್ರಿ 10 ಗಂಟೆಗಳವರೆಗೆ ನಡೆಯಲು ಅನುಮತಿ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸರಕಾರಿ ನೌಕರರು ಯಾವುದೇ ಪಕ್ಷಗಳ ಸಭೆ, ಸಮಾರಂಭಗಳಲ್ಲಿ ಭಾಗವಹಿಸುವದು ಹಾಗೂ ಯಾವುದೇ ರಾಜಕೀಯ ಪ್ರೇರಿತ ಪೆÇೀಸ್ಟಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಬಾರದು ಹಾಗೆ ಮಾಡಿದಲ್ಲಿ ತಾವು ಸಸ್ಪೆಂಡ್ ಆಗುತ್ತಿರಾ ಮತ್ತು ಯಾವುದೇ ರಾಜಕೀಯ ಪಕ್ಷಗಳ ಕಚೇರಿ, ಚರ್ಚ್, ಮಂದಿರ, ಮಸೀದಿಗಳಂತ ಧಾರ್ಮಿಕ ಸ್ಥಳಗಳಿಂದ 200 ಮೀಟರ್ ದೂರದಲ್ಲಿರಬೇಕು ಎಂದು ಹೇಳಿದರು.
ಧಾರ್ಮಿಕ ಸ್ಥಳಗಳಲ್ಲಿ ಯಾವುದೇ ರಾಜಕೀಯ ಸಭೆ ಸಮಾರಂಭಗಳು ನಡೆಯದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಮತ್ತು 10 ಲಕ್ಷಕಿಂತ ಹೆಚ್ಚಿನ ಹಣ ಜಪ್ತಿ ಮಾಡಿದಾಗ ಇನಕಮ್ ಟ್ಯಾಕ್ಸ ಡಿಪಾಟ್ಮೆರ್ಂಟಗೆ ಮಾಹಿತಿ ನೀಡಬೇಕು ಮತ್ತು ಸ್ಟಾರ್ ಕ್ಯಾಂಪೆನರಗೆ 1 ಲಕ್ಷದವರೆಗೆ ಹಣದ ಮಿತಿ ಇದೆ ಎಂದ ಅವರು ಚುನಾವಣೆಗೆ ಸಂಬಂಧಿಸಿದ ಇತರೆ ಮಾಹಿತಿಗಳನ್ನು ಅಧಿಕಾರಿಗಳಿಗೆ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಬೀದರ ಸಹಾಯಕ ಆಯುಕ್ತರಾದ ಲವೀಶ್ ಓರ್ಡಿಯಾ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆಯ ಉಪನಿರ್ದೆಶಕರಾದ ಸುರೇಖಾ, ಚುನಾವಣಾ ತಹಶಿಲ್ದಾರ ಅಣ್ಣಾರಾವ್ ಪಾಟೀಲ, ಜಿಲ್ಲೆಯ ಎಲ್ಲಾ ತಾಲ್ಲೂಕಿನ ತಹಶಿಲ್ದಾರರು ಸೇರಿದಂತೆ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.