ಮುಂಬೈ ಗ್ಯಾಂಗ್ ರೇಪ್ ಅತ್ಯಾಚಾರಿಗಳಿಗೆ ಜೀವಾವಧಿ ಶಿಕ್ಷೆ

ಮುಂಬೈ, ನ. ೨೫- ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಮುಂಬೈನ ಶಕ್ತಿ ಮಿಲ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಮೂವರು ಆರೋಪಿಗಳಿಗೆ ಮರಣದಂಡನೆ ಶಿಕ್ಷೆಯ ಬದಲಾಗಿ ಬಾಂಬೆ ಹೈ ಕೋರ್ಟ್ ಜೀವಾವಧಿ ಶಿಕ್ಷೆಯಾಗಿ ಪರಿವರ್ತನೆ ಮಾಡಿದೆ.
೨೦೧೩ರಲ್ಲಿ ಯುವ ಪತ್ರಕರ್ತೆಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಇದೀಗ ಆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತನೆ ಮಾಡಲಾಗಿದೆ.
ಅತ್ಯಾಚಾರದ ಪ್ರಮುಖ ಆರೋಪಿಗಳಾದ ಖಾಸಿಂ ಬೆಂಗಾಲಿ(೨೧), ಸಲೀಂ ಅನ್ಸಾರಿ (೨೮), ವಿಜಯ್ ಜಾಧವ್ (೧೯) ಅವರಿಗೆ ೨೦೧೪ರಲ್ಲಿ ಬಾಂಬೆ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿತ್ತು.
ಅಪರಾಧಿಗಳು ಸಲ್ಲಿಸಿದ್ದ ಮರಣದಂಡನೆ ಅರ್ಜಿ ವಿಚಾರಣೆ ಕುರಿತಂತೆ ವಿಚಾರಣೆ ನಡೆಸಿದ ಬಾಂಬೆ ನ್ಯಾಯಾಲಯ ಮೂವರು ಅಪರಾಧಿಗಳಿಗೆ ಮರಣ ದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತನೆ ಮಾಡಿದೆ.
೨೦೧೩ರಲ್ಲಿ ಸ್ನೇಹಿತ ಛಾಯಾಗ್ರಾಹಕನೊಂದಿಗೆ ಕೆಲಸಕ್ಕೆ ಹೋಗುತ್ತಿದ್ದ ಪತ್ರಕರ್ತೆಯನ್ನು ಮೂವರು ಅಪರಾಧಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದರು.
ಅತ್ಯಾಚಾರ ನಡೆದ ೨೪ ಗಂಟೆಯ ಒಳಗಾಗಿ ಆರೋಪಿಗಳನ್ನು ಮುಂಬೈ ಪೊಲೀಸರು ಪತ್ತೆ ಹಚ್ಚಿ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಪ್ರಕರಣದ ವಾದ-ಪ್ರತಿವಾದ ನಡೆದು ಮೂವರು ಅಪರಾಧಿಗಳಿಗೆ ಮುಂಬೈ ಹೈ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು.
ಐದು ಮಂದಿ ಸಾಮೂಹಿಕ ಅತ್ಯಾಚಾರ ಮಾಡಿದ್ದರು ಅದರಲ್ಲಿ ಇಬ್ಬರು ಬಾಲಾಪರಾಧಿಗಳ ಹಿನ್ನೆಲೆಯಲ್ಲಿ ಮೂರು ಮಂದಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು.
೨೦೧೩ರಲ್ಲಿ ಪತ್ರಕರ್ತೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮುಂಬೈ ಅಲ್ಲದೆ ರೆಡಿ ಮಹಾರಾಷ್ಟ್ರ ಸೇರಿದಂತೆ ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.