ಮುಕ್ತಾಂಬಿಕಾ ಬಿಸಿಎ ಕಾಲೇಜಿಗೆ ಚಿನ್ನದ ಪದಕ

ಕಲಬುರಗಿ ಅ 29: ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ನಡೆಸಿದ ಬಿಸಿಎ ಅಂತಿಮ ಪರೀಕ್ಷೆಯಲ್ಲಿ ನಗರದ ಮುಕ್ತಾಂಬಿಕಾ ಬಿಸಿಎ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿ ಅರ್ಪಿತಾ ಎಚ್ ಅವರು ಶೇ 87.53 ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದಾರೆ.
ಮಹಿಳಾ ವಿಶ್ವವಿದ್ಯಾಲಯವು ಅವರಿಗೆ ಚಿನ್ನದ ಪದಕ ನೀಡಿ ಪುರಸ್ಕರಿಸಿದೆ.
ವಿದ್ಯಾರ್ಥಿನಿಯ ಸಾಧನೆಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.ಪ್ರಾಚಾರ್ಯರು,ಅಧ್ಯಾಪಕರು ಶ್ಲಾಘಿಸಿದ್ದಾರೆ.